ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್
ಗಣಪತಿ ವಿಗ್ರಹಗಳು ದೇಶದ ಯಾವುದೇ ಮಸೀದಿಗಳ ಮುಂದೆ ಹಾದುಹೋಗುವ ಹಕ್ಕಿದೆ, ಇದನ್ನು ವಿರೋಧಿಸುವವರು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಹೇಳಿಕೆ ನೀಡಿದ್ದಾರೆ .

ಮಂಡ್ಯ: ಮದ್ದೂರು ಪಟ್ಟಣಕ್ಕೆ ಭೇಟಿ ನೀಡಿದ್ದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಗುರುವಾರ (ಸೆ.11) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು.
ಗಣಪತಿ ವಿಗ್ರಹಗಳು ದೇಶದ ಯಾವುದೇ ಮಸೀದಿಗಳ ಮುಂದೆ ಹಾದುಹೋಗುವ ಹಕ್ಕಿದೆ, ಇದನ್ನು ವಿರೋಧಿಸುವವರು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ನಾನು ಅಧಿಕಾರಕ್ಕೆ ಬಂದರೆ "ಅಕ್ರಮ ಮಸೀದಿಗಳನ್ನು" ಕೆಡವಲಾಗುವುದು ಎಂದು ಎಚ್ಚರಿಸಿದ್ದಾರೆ. ನಿರ್ದಿಷ್ಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಉದ್ದೇಶದಿಂದ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಎನ್‌ಎಸ್ ಸೆಕ್ಷನ್ 196(1)(ಚಿ), 299, 353(2) ಅನ್ಯಕೋಮಿಗೆ ಧಕ್ಕೆ ಹಾಗೂ ಕೋಮುಗಳ ನಡುವೆ ವೈರತ್ವ ಉಂಟುಮಾಡುವ ಭಾಷಣ ಮಾಡಿರುವ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಮದ್ದೂರು ಗಣೇಶ ವಿಸರ್ಜನಾ ಕಾರ್ಯಕ್ರಮದಲ್ಲಿ 'ಪ್ರಚೋದನಕಾರಿ' ಭಾಷಣ: ಸಿ.ಟಿ ರವಿ ವಿರುದ್ಧ ಪ್ರಕರಣ ದಾಖಲು; Video
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


