1 ಲಕ್ಷ ಕೋಟಿ ರೂ ಗೂ ಅಧಿಕ ಬೆಲೆ ಬಾಳುವ ಕಬ್ಬಿಣದ ಅದಿರು ಲೂಟಿ: ತನಿಖೆಗೆ SIT ರಚಿಸುವಂತೆ ಕೋರಿ ಸಿಎಂಗೆ ಪತ್ರ
ಎಚ್.ಕೆ.ಪಾಟೀಲ್ ನೇತೃತ್ವದ ಸಂಪುಟ ಉಪ ಸಮಿತಿ ವರದಿಯನ್ನು ರಾಜ್ಯ ಸರಕಾರ ಸ್ವೀಕರಿಸಿದ್ದರೂ ಇದುವರೆಗೂ ಯಾವುದೇ ಕ್ರಮವಹಿಸಿಲ್ಲ. ಆದ್ದರಿಂದ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರು: ಅಕ್ರಮ ಗಣಿಗಾರಿಕೆ ವಿಚಾರದ ಕುರಿತು ಅಧ್ಯಯನ ನಡೆಸಲು ಕಾನೂನು ಸಚಿವ ಎಚ್.ಕೆ. ಪಾಟೀಲ್ ನೇತೃತ್ವದಲ್ಲಿ ರಚಿಸಲಾಗಿದ್ದ ಸಂಪುಟ ಉಪ ಸಮಿತಿ ಸರಕಾರಕ್ಕೆ ಸಲ್ಲಿಸಿದ ವರದಿಯಂತೆ 1 ಲಕ್ಷ ಕೋಟಿ ರೂ.ಗೂ ಅಧಿಕ ಬೆಲೆ ಬಾಳುವ ಕಬ್ಬಿಣದ ಅದಿರನ್ನು ಲೂಟಿ ಮಾಡಿರುವುದು ತಿಳಿದು ಬಂದಿದೆ.
ಹೀಗಾಗಿ ಆ ಪ್ರಕರಣವನ್ನು ತನಿಖೆ ಮಾಡಲು ವಿಶೇಷ ತನಿಖಾ ತಂಡ ರಚಿಸಿಸಬೇಕು ಎಂದು ಕೋರಿ ಕಾಂಗ್ರೆಸ್ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಎಚ್.ಎಂ.ರೇವಣ್ಣ, ಡಾ.ಸಿ.ಎಸ್.ದ್ವಾರಕಾನಾಥ್, ವಿ.ಆರ್.ಸುದರ್ಶನ್, ಡಾ.ಎಲ್.ಹನುಮಂತಯ್ಯ, ಮೋಹನ್ ಕೊಂಡಜ್ಜಿ ಅವರು ಪತ್ರ ಬರೆದಿದ್ದಾರೆ.
ಎಚ್.ಕೆ.ಪಾಟೀಲ್ ನೇತೃತ್ವದ ಸಂಪುಟ ಉಪ ಸಮಿತಿ ವರದಿಯನ್ನು ರಾಜ್ಯ ಸರಕಾರ ಸ್ವೀಕರಿಸಿದ್ದರೂ ಇದುವರೆಗೂ ಯಾವುದೇ ಕ್ರಮವಹಿಸಿಲ್ಲ. ಆದ್ದರಿಂದ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕೆಲವು ವ್ಯಕ್ತಿ, ಸಂಘ-ಸಂಸ್ಥೆಗಳು, ರಾಜಕಾರಣಿಗಳು ಮತ್ತು ಅಧಿಕಾರಿಗಳ ಸಹಕಾರದಿಂದ ಅಕ್ರಮವಾಗಿ 1ಲಕ್ಷ ಕೋಟಿ ರೂ. ಬೆಲೆಬಾಳುವ ಕಬ್ಬಿಣದ ಅದಿರನ್ನು ಲೂಟಿ ಮಾಡಿ, ಸರಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ್ದಾರೆ. ಆದ್ದರಿಂದ ಕಾನೂನು ಸಚಿವ ಎಚ್.ಕೆ.ಪಾಟೀಲ್ ನೇತೃತ್ವದ ಸಂಪುಟ ಉಪ ಸಮಿತಿ ನೀಡಿರುವ ವರದಿಯಂತೆ ತಪ್ಪಿತಸ್ಥರು ಯಾವುದೇ ಪಕ್ಷದವರಾಗಿದ್ದರೂ, ಯಾವುದೇ ಅಧಿಕಾರಿಗಳಾಗಿರಲಿ, ಯಾವುದೇ ಸಂಘ-ಸಂಸ್ಥೆಯವರಾಗಿರಲಿ ಅಂತವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ದಾವಣಗೆರೆ: ಸಚಿವ SS ಮಲ್ಲಿಕಾರ್ಜುನ ಕುಟುಂಬ ಸೇರಿ 26 ಕ್ವಾರಿ ಗುತ್ತಿಗೆದಾರರಿಗೆ ದಂಡ ವಿಧಿಸಿದ ಗಣಿ ಇಲಾಖೆ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


