ಬೆಂಗಳೂರು: ಪ್ರೆಸ್ಟೀಜ್ ಜಿಂದಾಲ್ ಅಪಾರ್ಟ್‌ಮೆಂಟ್‌ನ 24ನೇ ಮಹಡಿಯಿಂದ ಹಾರಿ IAF ಎಂಜಿನಿಯರ್ ಆತ್ಮಹತ್ಯೆ
ಹಲಸೂರು ಮಿಲಿಟರಿ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದ 25 ವರ್ಷದ ಲೋಕೇಶ್ ಪವನ್ ಕೃಷ್ಣ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪ್ರೆಸ್ಟೀಜ್ ಜಿಂದಾಲ್ ಸಿಟಿ ಅಪಾರ್ಟ್‌ಮೆಂಟ್‌ನ 24 ನೇ ಮಹಡಿಯಿಂದ ಭಾರತೀಯ ವಾಯುಪಡೆಯ ಎಂಜಿನಿಯರ್ ಲೋಕೇಶ್ ಜಿಗಿದಿದ್ದಾರೆ.

ಬೆಂಗಳೂರು: ಭಾರತೀಯ ವಾಯುಪಡೆಯ ಎಂಜಿನಿಯರ್ ಒಬ್ಬರು ಭಾನುವಾರ ಸಂಜೆ ಅಪಾರ್ಟ್ ಮೆಂಟ್ ನ 24ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತನನ್ನು ಹಲಸೂರು ಮಿಲಿಟರಿ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದ 25 ವರ್ಷದ ಲೋಕೇಶ್ ಪವನ್ ಕೃಷ್ಣ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪ್ರೆಸ್ಟೀಜ್ ಜಿಂದಾಲ್ ಸಿಟಿ ಅಪಾರ್ಟ್‌ಮೆಂಟ್‌ನ 24 ನೇ ಮಹಡಿಯಿಂದ ಭಾರತೀಯ ವಾಯುಪಡೆಯ ಎಂಜಿನಿಯರ್ ಲೋಕೇಶ್ ಜಿಗಿದಿದ್ದಾರೆ.
ನಿನ್ನೆ ಸಂಜೆ ಲೋಕೇಶ್ ತಮ್ಮ ಸಹೋದರಿ ಲಕ್ಷ್ಮಿ ಅವರನ್ನು ಭೇಟಿ ಮಾಡಿದ್ದರು, ಯಾವುದೋ ವಿಷಯದಿಂದ ಅವರ ಮನಸ್ಥಿತಿ ಹಾಳಾಗಿತ್ತು ಆ ಕ್ಷಣದಲ್ಲಿ ಅವರು ಹಾರಿ ಆತ್ಮಹತ್ಯೆ ಮಾಡಿಕೊಂಡರು ಎಂದು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ತಿಳಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



