ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ: ವಿಜಯಪುರ SBI ಬ್ಯಾಂಕ್ ಸಿಬ್ಬಂದಿ ಕಟ್ಟಿಹಾಕಿ; 8 ಕೋಟಿ ಹಣ, 50 ಕೋಟಿ ಮೌಲ್ಯದ ಚಿನ್ನಾಭರಣ ಕಳವು?
ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ನಲ್ಲಿ ದೊಡ್ಡಮಟ್ಟದಲ್ಲಿ ದರೋಡೆ ನಡೆದಿದೆ. ವಿಜಯಪುರದ ಚಡಚಣದಲ್ಲಿ SBI ಬ್ಯಾಂಕ್ ಗೆ ನುಗ್ಗಿದ ದರೋಡೆಕೋರರು ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ಅಪಾರ ಪ್ರಮಾಣದಲ್ಲಿ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ವಿಜಯಪುರ: ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ನಲ್ಲಿ ದೊಡ್ಡಮಟ್ಟದಲ್ಲಿ ದರೋಡೆ ನಡೆದಿದೆ. ವಿಜಯಪುರದ ಚಡಚಣದಲ್ಲಿ SBI ಬ್ಯಾಂಕ್ ಗೆ ನುಗ್ಗಿದ ದರೋಡೆಕೋರರು ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ಅಪಾರ ಪ್ರಮಾಣದಲ್ಲಿ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಮುಖಕ್ಕೆ ಮುಸುಕು ಧರಿಸಿ ಬಂದಿದ್ದ ದರೋಡೆಕೋರರು ಪಿಸ್ತೂಲು, ಮಾರಕಾಸ್ತ್ರಗಳೊಂದಿಗೆ ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿಯನ್ನು ಬೆದರಿಸಿ ಕಟ್ಟಿಹಾಕಿ ದರೋಡೆ ನಡೆಸಿದ್ದಾರೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್ ನಲ್ಲಿ 8 ಕೋಟಿ ಹಣ, 50 ಕೋಟಿ ಚಿನ್ನಾಭರಣ ದರೋಡೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



