ಹೊಸದಾಗಿ 18,500 ಶಿಕ್ಷಕರ ಹುದ್ದೆ ನೇಮಕಾತಿಗೆ ಕ್ರಮ: ಮಧು ಬಂಗಾರಪ್ಪ
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 13,500 ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇವಲ 5,428 ಶಿಕ್ಷಕರನ್ನು ಮಾತ್ರ ನೇಮಕ ಮಾಡಿತ್ತು ಎಂದರು.

ಚಾಮರಾಜನಗರ: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳೂ ಸೇರಿದಂತೆ ಮತ್ತೆ ಹೆಚ್ಚುವರಿಯಾಗಿ 18,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 13,500 ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇವಲ 5,428 ಶಿಕ್ಷಕರನ್ನು ಮಾತ್ರ ನೇಮಕ ಮಾಡಿತ್ತು ಎಂದರು.
ಶಾಲಾ ಕೊಠಡಿಗಳ ಶಿಥಿಲಾವಸ್ಥೆ ವಿಚಾರವಾಗಿ ಪ್ರತಿಕ್ರಿಯಿಸಿ, ಇದು ಕೇವಲ ನಮ್ಮ ಸರಕಾರದ ಅವಧಿಯಲ್ಲಿ ಸೃಷ್ಟಿಯಾದ ಸಮಸ್ಯೆಯಲ್ಲ. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದು, ಎಲ್ಲಾ ಶಾಲೆಗಳಲ್ಲೂ ಸಮಸ್ಯೆಗಳಿಲ್ಲ ಎಂದು ಹೇಳುತ್ತಿಲ್ಲ. ಈ ಹಿಂದಿನ ಸರಕಾರ ಯಾವುದೇ ಕೊಠಡಿಯನ್ನು ಕಟ್ಟಿಲ್ಲ. ನೇಮಕ ಕೂಡ ಮಾಡಿಲ್ಲ. ನಾವೂ ಅಧಿಕಾರಕ್ಕೆ ಬಂದ ಮೇಲೆ ವಿವೇಕ ಯೋಜನೆಯಡಿ 8,200 ಕೊಠಡಿ ಪೂರ್ಣ ಮಾಡಿದ್ದೇವೆ. ಮತ್ತೆ 3000 ಸಾವಿರ ಕೊಠಡಿ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಅಲ್ಲದೇ ನೂತನವಾಗಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ಧಾರ್ಮಿಕ ಕ್ಷೇತ್ರದ ಬಗ್ಗೆ ಶಿಳ್ಳೆ ಹೊಡೆಯುವುದೇ ಸಿ ಟಿ ರವಿ ಅವರ ಅಭ್ಯಾಸವಾಗಿದೆ. ಇದು ಕೆಟ್ಟ ಗುಣ. ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ಎಲ್ಲರ ಮೈ-ಮನಗಳಲ್ಲಿ ಇದ್ದರೆ ಮಾತ್ರ ಇಂತಹ ವ್ಯವಸ್ಥೆ ಕಡಿಮೆಯಾಗುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



