ರಾಜ್ಯ

ಶಾರ್ಟ್ ಸರ್ಕ್ಯೂಟ್'ನಿಂದ ಮನೆಯಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರಿಗೆ ಗಾಯ

ಬೆಳಗಿನ ಜಾವ 2.40 ರ ಸುಮಾರಿಗೆ ನೆಲ ಮಹಡಿಯಲ್ಲಿರುವ ಮೀಟರ್ ಬೋರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲ ಮಹಡಿಯಲ್ಲಿ ನಿಲ್ಲಿಸಿದ್ದ ಎರಡು ವಾಹನಗಳಿಗೂ ಬೆಂಕಿ ಹೊತ್ತಿಕೊಂಡಿದ್ದು, ಕಟ್ಟಡದಾದ್ಯಂತ ದಟ್ಟ ಹೊಗೆ ಆವರಿಸಿದೆ.

ಶಾರ್ಟ್ ಸರ್ಕ್ಯೂಟ್'ನಿಂದ ಮನೆಯಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರಿಗೆ ಗಾಯ
ಸಂಗ್ರಹ ಚಿತ್ರ
Published On :

ಬೆಂಗಳೂರು: ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಢ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿರುವ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಕೃಷ್ಣಾ ಲೇಔಟ್‌ನ 3 ನೇ ಕ್ರಾಸ್ ಬಳಿಯ ಮೂರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ಘಟನೆ ವೇಳೆ ಮೊದಲ ಮಹಡಿಯಲ್ಲಿ ಮಲಗಿದ್ದ ಶೀಲಾ (44), ಗೋಪಿ (49), ಅಭಿಷೇಕ್ (18) ಮತ್ತು ರಮ್ಯಾ (28) ಎಂಬ ನಾಲ್ವರು ಗಾಯಗೊಂಡಿದ್ದಾರೆ.

ಬೆಳಗಿನ ಜಾವ 2.40 ರ ಸುಮಾರಿಗೆ ನೆಲ ಮಹಡಿಯಲ್ಲಿರುವ ಮೀಟರ್ ಬೋರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲ ಮಹಡಿಯಲ್ಲಿ ನಿಲ್ಲಿಸಿದ್ದ ಎರಡು ವಾಹನಗಳಿಗೂ ಬೆಂಕಿ ಹೊತ್ತಿಕೊಂಡಿದ್ದು, ಕಟ್ಟಡದಾದ್ಯಂತ ದಟ್ಟ ಹೊಗೆ ಆವರಿಸಿದೆ.

ಕೂಡಲೇ ನೆರೆಹೊರೆಯವರು, ಗೋಪಿ ಕುಟುಂಬದವರಿಗೆ ಕರೆ ಮಾಡಿ ಎಚ್ಚರಿಸಿದ್ದಾರೆ. ಆದರೆ, ಕೆಳಮಹಡಿಯಲ್ಲಿ ಮನೆಯಲ್ಲಿದ್ದ ಗೋಪಿ ಕುಟುಂಬದವರು, ಹೊಗೆ ಸೇವಿಸಿ ತೀವ್ರವಾಗಿ ಅಸ್ವಸ್ಥರಾಗಿದ್ದು, ಹೊರ ಬರಲಾಗದೆ ಸಂಕಷ್ಟಕ್ಕೆ ತುತ್ತಾಗಿದ್ದರು. ಈ ಘಟನೆ ಬಗ್ಗೆ ಮಾಹಿತಿ ಪಡೆದ ಬೇಗೂರು ಠಾಣೆ ಹೊಯ್ಸಳ ವಾಹನದ ಪೊಲೀಸರು, ತಕ್ಷಣವೇ ಘಟನಾ ಸ್ಥಳಕ್ಕೆ ತೆರಳಿ, ಸ್ಥಳೀಯರ ನೆರವಿನಿಂದ ಗೋಪಿ ಕುಟುಂಬವನ್ನು ರಕ್ಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.