ರಾಜ್ಯ

ಬಸ್ ಚಾಲನೆ ವೇಳೆ ಹೃದಯಾಘಾತ: ಸಾವಿನಲ್ಲೂ 45ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿಸಿ ಮಾನವೀಯತೆ ಮೆರೆದ KSRTC ಚಾಲಕ..!

ನೆಲಮಂಗಲದ ಜಾಸ್ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ರಾಜೀವ್ ಬೀರಸಾಲ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಬಸ್ಸನ್ನು ಹೆದ್ದಾರಿಯ ಒಂದು ಬದಿಯಲ್ಲಿ ನಿಲ್ಲಿಸಿದ್ದಾರೆ.

ಬಸ್ ಚಾಲನೆ ವೇಳೆ ಹೃದಯಾಘಾತ: ಸಾವಿನಲ್ಲೂ 45ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿಸಿ ಮಾನವೀಯತೆ ಮೆರೆದ KSRTC ಚಾಲಕ..!
ಸಂಗ್ರಹ ಚಿತ್ರ
Published On :

ಬೆಂಗಳೂರು: ಬಸ್ ಚಾಲನೆ ವೇಳೆ ಹೃದಯಾಘಾತವಾಗಿದ್ದರೂ, ಬಸ್ಸನ್ನು ಸುರಕ್ಷಿತವಾಗಿ ನಿಲ್ಲಿಸಿ 45ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿಸಿ ಕೆಎಸ್ಆರ್'ಟಿಸಿ ಬಸ್ ಚಾಲಕರೊಬ್ಬರು ಸಾವಿನಲ್ಲೂ ಮಾನವೀಯತೆ ಮೆರೆದಿದ್ದಾರೆ.

ರಾಜೀವ್ ಬೀರಸಾಲ್ (56) ಹೃದಯಾಘಾತದಿಂದ ಮೃತರಾದ ಚಾಲಕ. ಇವರು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನವರಾಗಿದ್ದು ಸುಮಾರು 20 ವರ್ಷಗಳಿಂದ ಕೆಎಸ್‌ಆರ್‌ಟಿಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಮಂಗಳವಾರ ಬೆಂಗಳೂರಿಂದ ಹರಿಹರಕ್ಕೆ ಹೋಗುತ್ತಿದ್ದ ಕೆಎಸ್ಆರ್​​ಟಿಸಿ ರಾಜಹಂಸ ಬಸ್'ನ್ನು ರಾಜೀವ್ ಬೀರಸಾಲ್ ಅವರು ಚಲಾಯಿಸುತ್ತಿದ್ದರು.

ನೆಲಮಂಗಲದ ಜಾಸ್ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ರಾಜೀವ್ ಬೀರಸಾಲ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಬಸ್ಸನ್ನು ಹೆದ್ದಾರಿಯ ಒಂದು ಬದಿಯಲ್ಲಿ ನಿಲ್ಲಿಸಿದ್ದಾರೆ. ಇದರಿಂದ ಸಂಭಾವ್ಯ ಅಪಘಾತ ತಪ್ಪಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್ ನಿಲ್ಲಿಸಿದ ಕೂಡಲೇ ರಾಜೀವ್ ಅವರು ಕೆಳಗೆ ಬಿದ್ದಿದ್ದು, ಇದನ್ನು ಗಮನಿಸಿದ ಪ್ರಯಾಣಿಕರು ಕೂಡಲೇ ಆ್ಯಂಬುಲೆನ್ಸ್​ಗೆ ಕರೆ ಮಾಡಿದ್ದಾರೆ. ಆ್ಯಂಬುಲೆನ್ಸ್ ಸ್ಥಳಕ್ಕೆ ಬರುವ ವೇಳೆಗೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ರಾಜೀವ್ ಅವರು ಕೊನೆಯುಸಿರೆಳೆದಿದ್ದಾರೆ. ಪ್ರಾಣ ಹೋಗುವ ನೋವಿನಲ್ಲೂ ಪ್ರಯಾಣಿಕರ ಪ್ರಾಣ ಉಳಿಸಿದ ಚಾಲಕನಿಗೆ ಜನ ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.