ಅಕ್ರಮ ಸಾಗಾಟ ಮಾಡುತ್ತಿದ್ದ 1 ಕೋಟಿ ರೂ ಮೌಲ್ಯದ ತಂಬಾಕು ವಶಕ್ಕೆ
ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಲ್ಲಿ ದಾಳಿ ನಡೆಸಿ ಸೂಕ್ತ ದಾಖಲೆಗಳಿಲ್ಲದ ವಿವಿಧ ಬ್ರ್ಯಾಂಡ್‌ಗಳ 850ಕ್ಕೂ ಹೆಚ್ಚು ಚೀಲಗಳ ಪಾನ್ ಮಸಾಲಾ ಹಾಗೂ ತಂಬಾಕು ಪದಾರ್ಥಗಳನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು: ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಜಾರಿ ವಿಭಾಗದ (ದಕ್ಷಿಣ ವಲಯ) ಅಧಿಕಾರಿಗಳು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಲ್ಲಿ ದಾಳಿ ನಡೆಸಿ ಸೂಕ್ತ ದಾಖಲೆಗಳಿಲ್ಲದ ವಿವಿಧ ಬ್ರ್ಯಾಂಡ್‌ಗಳ 850ಕ್ಕೂ ಹೆಚ್ಚು ಚೀಲಗಳ ಪಾನ್ ಮಸಾಲಾ ಹಾಗೂ ತಂಬಾಕು ಪದಾರ್ಥಗಳನ್ನು ವಶಕ್ಕೆ ಪಡೆದಿದ್ದಾರೆ.
ಜಿಎಸ್‌ಟಿ ನಿಯಮಗಳ ಪ್ರಕಾರ ಬಿಲ್ಲುಗಳಿಲ್ಲದೆ ಸಾಗಿಸಲಾಗುತ್ತಿದ್ದ ದೊಡ್ಡ ಪ್ರಮಾಣದ ತಂಬಾಕು ಪದಾರ್ಥ ವಶಪಡಿಸಿಕೊಳ್ಳಲಾಗಿದೆ.
ಕಮಲಾ ಪಸಂದ್ ಪಾನ್ ಮಸಾಲಾ, ಹ್ಯಾನ್ಸ್ ಚಾಪ್, ಚೈನಿ ಫಿಲ್ಟರ್ ತಂಬಾಕು ಹಾಗೂ ಶಿಖರ್ ಪಾನ್ ಮಸಾಲಾ ಬ್ರ್ಯಾಂಡ್'ಗಳ ಪಾನ್ ಮಸಾಲಾ ಹಾಗೂ ತಂಬಾಕು ಪದಾರ್ಥಗಳನ್ನು ದೆಹಲಿಯಿಂದ ಬೆಂಗಳೂರಿಗೆ ರೈಲಿನ ಮೂಲಕ ಸಾಗಿಸಲಾಗಿತ್ತು. ಅವುಗಳನ್ನು ಸರಕು ವಾಹನಗಳಲ್ಲಿ ಹಾಗೂ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಚೀಲಗಳಲ್ಲಿ ತುಂಬಿ ಇಡಲಾಗಿತ್ತು. ಇದನ್ನು ಅಧಿಕಾರಿಗಳ ಪತ್ತೆ ಮಾಡಿದ್ದು, ಪರಿಶೀಲನೆಯ ಸಂದರ್ಭದಲ್ಲಿ 1 ಕೋಟಿ ರು. ಮೌಲ್ಯದ ಒಟ್ಟು 850ಕ್ಕೂ ಅಧಿಕ ಚೀಲಗಳ ಪಾನ್ ಮಸಾಲಾ ಹಾಗೂ ತಂಬಾಕು ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಿಎಸ್‌ಟಿ ನಿಯಮಾವಳಿ ಉಲ್ಲಂಘನೆಯ ಸ್ವರೂಪವನ್ನು ಖಚಿತಪಡಿಸಲು ವಾಣಿಜ್ಯ ತೆರಿಗೆ ಇಲಾಖೆ ಪರಿಶೀಲನಾ ಪ್ರಕ್ರಿಯೆ ಮುಂದುವರಿಸಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



