ಗದಗದಲ್ಲಿ ಭೀಕರ ಅಪಘಾತ: ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಸೇರಿ ಮೂವರು ಸ್ಥಳದಲ್ಲೇ ಸಾವು
ಅರ್ಜುನ್ ನೆಲ್ಲೂರ, ವೀರೇಶ್ ಉಪ್ಪಾರ ಮತ್ತು ರವಿ ನೆಲ್ಲೂರ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿ ಬಳಿಕ ಬಸ್ಗೆ ಡಿಕ್ಕಿ ಹೊಡೆದಿದೆ.

ಗದಗ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕಾನ್ಸ್ಟೇಬಲ್ಗಳು ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಡೆದಿದೆ. ಕಾರಿನಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಗಳಾದ ಅರ್ಜುನ್ ನೆಲ್ಲೂರ(29ವ) ಮತ್ತು ವೀರೇಶ್ ಉಪ್ಪಾರ(31ವ) ಸೇರಿ ಅರ್ಜುನ್ ಚಿಕ್ಕಪ್ಪ ರವಿ ನೆಲ್ಲೂರ(43ವ) ಮೃತರಾಗಿದ್ದಾರೆ.
ಘಟನೆ ಹೇಗಾಯಿತು?
ಅರ್ಜುನ್ ನೆಲ್ಲೂರ, ವೀರೇಶ್ ಉಪ್ಪಾರ ಮತ್ತು ರವಿ ನೆಲ್ಲೂರ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿ ಬಳಿಕ ಬಸ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಭೀಕರತೆಗೆ ಕಾರಿನ ಬಿಡಿಭಾಗಗಳು ಚೆಲ್ಲಾಪಿಲ್ಲಿಯಾಗಿವೆ.
ಹಸೆಮಣೆ ಏರಬೇಕಿದ್ದವರು ದಾರುಣ ಅಂತ್ಯ
ಘಟನೆಯಲ್ಲಿ ಮೃತಪಟ್ಟ ಮೂವರ ಪೈಕಿ ಇಬ್ಬರು ಕಾನ್ಸ್ಟೇಬಲ್ಗಳ ವಿವಾಹ ನಿಶ್ಚಯವಾಗಿತ್ತು. ಅರ್ಜುನ ನೆಲ್ಲೂರ ಮತ್ತು ವೀರೇಶ್ ಉಪ್ಪಾರ ಹಸೆಮಣಿ ಏರುವವರಿದ್ದರು. ಇವರಿಬ್ಬರು ಪೊಲೀಸ್ ಇಲಾಖೆ ಸೇರಿ ಏಳು ವರ್ಷವಾಗಿತ್ತು.
ವೀರೇಶ್ ಉಪ್ಪಾರ ಕೊಪ್ಪಳ ಜಿಲ್ಲಾ ಪೊಲೀಸ್ ವೈರ್ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸಿದರೆ, ಅರ್ಜುನ್ ನೆಲ್ಲೂರ ಹಾವೇರಿ ಜಿಲ್ಲಾ ಪೊಲೀಸ್ ವೈರ್ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



