ಆರ್ಡರ್ ತಡವಾಗಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ; Mubarak, Shahrukh ಬಂಧನ, Video
ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಈ ಘಟನೆ ನಡೆದಿದ್ದು, ಪ್ರಸ್ತುತ ಡೆಲಿವರಿ ಬಾಯ್ ಮೇಲೆ ಹಲ್ಲೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಆನ್ಲೈನ್ನಲ್ಲಿ ಆರ್ಡರ್ ಮಾಡಿದ್ದ ಆಹಾರ ತಡವಾಗಿ ಬಂದಿದ್ದಕ್ಕೆ ಜೊಮ್ಯಾಟೊ ಡೆಲಿವರಿ ಬಾಯ್ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಈ ಘಟನೆ ನಡೆದಿದ್ದು, ಪ್ರಸ್ತುತ ಡೆಲಿವರಿ ಬಾಯ್ ಮೇಲೆ ಹಲ್ಲೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮುಬಾರಕ್ ಹಾಗೂ ಶಾರೂಕ್ ಎಂದು ಗುರುತಿಸಲಾಗಿದ್ದು, ಹಲ್ಲೆಗೊಳಗಾದ ಚಾಂದ್ ಎಂಬಾತ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.
ಮೂಲಗಳ ಪ್ರಕಾರ ಸೆ.12ರಂದು ರಾತ್ರಿ ಬಾಪುಜಿ ನಗರದ ಬಳಿ ಆರೋಪಿಗಳು ಜ್ಯೊಮೊಟೊನಲ್ಲಿ ಬಿರಿಯಾನಿ ಆರ್ಡರ್ ಮಾಡಿದ್ದರು. ಮಳೆ ಹಿನ್ನೆಲೆಯಲ್ಲಿ ಡೆಲಿವರಿ ಬಾಯ್ ಚಾಂದ್ ತಡವಾಗಿ ಹೋಗಿದ್ದ. ಇದರಿಂದ ಕೆರಳಿದ ಆರೋಪಿಗಳು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ನೀರಿನ ಕ್ಯಾನ್ನಿಂದ ಹೊಡೆದಿದ್ದರು.
ಘಟನೆಯ ವಿಡಿಯೋವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆಹಿಡಿದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



