ಚಿಕ್ಕಮಗಳೂರು: ಶಿಕ್ಷಕ ಸಾವು; ಸೆಲ್ಫಿ ತೆಗೆದುಕೊಳ್ಳುವಾಗ ಪತ್ನಿ ಕಣ್ಣೇದುರೆ ಪ್ರಪಾತಕ್ಕೆ ಬಿದ್ದು ಪತಿ ಮರಣ!
ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣವಾದ ವ್ಯೂವ್ ಪಾಯಿಂಟ್ನಲ್ಲಿ ಈ ದುರ್ಘಟನೆ ನಡೆದಿದೆ.

ಚಿಕ್ಕಮಗಳೂರು: ಪತ್ನಿ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿರುವಾಗ ಕಾಲು ಜಾರಿ ಪ್ರಪಾತಕ್ಕೆ ಬಿದ್ದು ಪತಿ ಸಾವನ್ನಪ್ಪಿರುವ ಘಟನೆ ಕೆಮ್ಮಣ್ಣು ಗುಂಡಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣವಾದ ವ್ಯೂವ್ ಪಾಯಿಂಟ್ನಲ್ಲಿ ಈ ದುರ್ಘಟನೆ ನಡೆದಿದೆ. ಮೃತನನ್ನು 40 ವರ್ಷದ ಸಂತೋಷ್ ಎಂದು ಗುರುತಿಸಲಾಗಿದೆ. ಲಿಂಗದಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಕ್ಷಕರಾಗಿದ್ದ ಸಂತೋಷ್ ದಸರಾ ರಜೆ ಹಿನ್ನೆಲೆಯಲ್ಲಿ ಪತ್ನಿ ಶ್ವೇತ ಜೊತೆ ಚಿಕ್ಕಮಗಳೂರಿನ ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿಗೆ ತೆರಳಿದ್ದರು. ಕೆಮ್ಮಣ್ಣುಗುಂಡಿ ವ್ಯೂವ್ ಪಾಯಿಂಟ್ ನಲ್ಲಿ ಹೆಂಡತಿಯೊಂದಿಗೆ ಸೆಲ್ಫಿ ತೆಗೆಯಲು ಸಂತೋಷ್ ಮುಂದಾಗಿದ್ದರು. ಈ ವೇಳೆ ಕಾಲು ಜಾರಿ ನೂರಾರು ಅಡಿ ಆಳಕ್ಕೆ ಬಿದ್ದು ಸಂತೋಷ್ ಮೃತಪಟ್ಟಿದ್ದಾರೆ. ದಂಪತಿ ಕಳೆದ 5 ವರ್ಷಗಳ ಹಿಂದೆ ವಿವಾಹವಾಗಿದ್ದರು. ಪತ್ನಿ ಕಣೇದುರೆ ಸಂತೋಷ್ ಪ್ರಪಾತಕ್ಕೆ ಬಿದ್ದಿದ್ದು ಪತಿಯನ್ನು ಕಳೆದುಕೊಂಡ ಪತ್ನಿ ಶ್ವೇತ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಹಗ್ಗದ ಮೂಲಕ ಪ್ರಪಾತದಿಂದ ಮೇಲಕ್ಕೆತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



