ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಜಯ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ!
ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರ ತೆಗೆದುಕೊಂಡಿದೆ.

ಬಾಗಲಕೋಟೆ: ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರ ತೆಗೆದುಕೊಂಡಿದೆ. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಅವರು, ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಮಾಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದರು.
ಲಿಂಗಾಯತ ಧರ್ಮ ವಿರೋಧಿ ಹೇಳಿಕೆ, ಅಕ್ರಮ ಆಸ್ತಿ ಗಳಿಕೆ ಸೇರಿದಂತೆ ಸ್ವಾಮೀಜಿ ಮೇಲೆ ಹಲವು ಆರೋಪ ಹೊರಿಸಿ, ಪೀಠದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಅಸೂಟಿ ಹೇಳಿದರು. ಇಂದು ನಡೆದ ಸಭೆಯಲ್ಲಿ ಸ್ವಾಮೀಜಿಯನ್ನು ಉಚ್ಛಾಟಿಸುವ ನಿರ್ಣಯ ತೆಗೆದುಕೊಳ್ಳಲಾಯಿತು. ಸ್ವಾಮೀಜಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ್ದಾರೆ. ಈ ಬಗ್ಗೆ 2014ರಲ್ಲಿ ಸ್ವಾಮೀಜಿಗೆ ನೋಟಿಸ್ ನೀಡಿದ್ದೇವು ಎಂದು ನೀಲಕಂಠ ಅಸೂಟಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



