Caste Survey: ಸಾಮಾಜಿಕ- ಆರ್ಥಿಕ ಸಮೀಕ್ಷೆ: ಧರ್ಮದ ಕಾಲಂನಲ್ಲಿ ನಾಸ್ತಿಕ ಅಂತಾ ಬರೆಸುವೆ- ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ
ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವ ಗುರಿಯೊಂದಿಗೆ ಇಂದಿನಿಂದ ಅಕ್ಟೋಬರ್ 7ರ ವರೆಗೆ ರಾಜ್ಯಾದ್ಯಂತ ಈ ಸಮೀಕ್ಷೆ ಕಾರ್ಯವನ್ನು ರಾಜ್ಯ ಸರ್ಕಾರ ನಡೆಸುತ್ತಿದೆ.

ಬೆಂಗಳೂರು: ಹಲವು, ಗೊಂದಲ, ವಿರೋಧಗಳ ನಡುವೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಇಂದಿನಿಂದ ಜಾತಿ ಸಮೀಕ್ಷೆ ಆರಂಭವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ, ಧರ್ಮದ ಕಾಲಂನಲ್ಲಿ ನಾಸ್ತಿಕ ಎಂದು ಬರೆಸುವೆ ಎಂದು ಹೇಳಿಕೊಂಡಿದ್ದಾರೆ.
ದೇವರು- ದಿಂಡಿರು, ಸ್ವರ್ಗ-ನರಕ, ಆ ಲೋಕ, ಈ ಲೋಕ, ಆ ಜನ್ಮ, ಈ ಜನ್ಮ, ಈ ವೈಗ್ಯೆರೆಗಳಲ್ಲಿ ನಂಬಿಕೆ ಇರದವನು ನಾನು ಎಂದು ಅವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ಪುಟದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಕುಂ.ವೀ. ಎಂದೇ ಜನಪ್ರಿಯರಾಗಿರುವ ಕಾದಂಬರಿಕಾರ, ಕತೆಗಾರ ಕುಂ. ವೀರಭದ್ರಪ್ಪ ಅವರು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನಲ್ಲಿ ವಾಸಿಸುತ್ತಿದ್ದಾರೆ.
ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವ ಗುರಿಯೊಂದಿಗೆ ಇಂದಿನಿಂದ ಅಕ್ಟೋಬರ್ 7ರ ವರೆಗೆ ರಾಜ್ಯಾದ್ಯಂತ ಈ ಸಮೀಕ್ಷೆ ಕಾರ್ಯವನ್ನು ರಾಜ್ಯ ಸರ್ಕಾರ ನಡೆಸುತ್ತಿದೆ. ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ವಿಳಂಬವಾಗಿ ಸಮೀಕ್ಷೆ ಆರಂಭವಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



