ರಾಜ್ಯ

ಬೆಳಗಾವಿ: ಅಪ್ಪ ಕ್ಷಮಿಸು, ನನ್ನ ಸಾವಿಗೆ ನಾನೇ ಕಾರಣ; ಹಾಸ್ಟೆಲ್‌ನಲ್ಲಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!

ಮೃತಳನ್ನು ಗೋಕಾಕ್ ನ ಘಟಪ್ರಭಾ ಗ್ರಾಮದ ಸುಮಿತ್ರಾ ಗೋಕಾಕ್ ಎಂದು ಗುರುತಿಸಲಾಗಿದೆ.

ಬೆಳಗಾವಿ: ಅಪ್ಪ ಕ್ಷಮಿಸು, ನನ್ನ ಸಾವಿಗೆ ನಾನೇ ಕಾರಣ; ಹಾಸ್ಟೆಲ್‌ನಲ್ಲಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!
ವಿದ್ಯಾರ್ಥಿನಿ ಆತ್ಮಹತ್ಯೆ
Published On :

ಬೆಳಗಾವಿ: ಬೆಳಗಾವಿಯ ಸದಾಶಿವನಗರದ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತಳನ್ನು ಗೋಕಾಕ್ ನ ಘಟಪ್ರಭಾ ಗ್ರಾಮದ ಸುಮಿತ್ರಾ ಗೋಕಾಕ್ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಟಿಫನ್ ತೆಗೆದುಕೊಂಡು ರೂಮ್ ಗೆ ಹೋಗಿದ್ದ ಸುಮಿತ್ರಾ ಎಷ್ಟು ಹೊತ್ತಾದರೂ ಹೊರಗೆ ಬಾರದರೆ ಇದ್ದಿದ್ದರಿಂದ ಆತಂಕಗೊಂಡ ಸಹಪಾಠಿಗಳು ವಾರ್ಡನ್ ಗೆ ವಿಷಯ ತಿಳಿಸಿದ್ದಾರೆ. ನಂತರ ವಿದ್ಯಾರ್ಥಿನಿ ಸುಮಿತ್ರಾ ತಂದೆ, ಸಂಬಂಧಿಕರ ಸಮ್ಮುಖದಲ್ಲಿ ಹಾಸ್ಟೆಲ್ ರೂಮ್ ಬಾಗಿಲು ಹೊಡೆದು ನೋಡಿದಾಗ ಮಗಳು ನೇಣು ಬಿಗುದುಕೊಂಡಿರುವುದು ಕಾಣಿಸಿದೆ. ಈ ದೃಶ್ಯವನ್ನು ನೋಡಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಕೊಠಡಿಯಲ್ಲಿ ಪರಿಶೀಲನೆ ನಡೆಸಿದಾಗ ಡೆತ್ ನೊಟ್ ಪತ್ತೆಯಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆಟ್ ನೋಟ್ ನಲ್ಲಿ ಸುಮಿತ್ರಾ ಬರೆದಿರುವುದು ಪತ್ತೆಯಾಗಿದೆ. ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.