ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಸಿಕ್ಕ ಮರುದಿನವೇ ಚಾಮುಂಡಿಬೆಟ್ಟದಲ್ಲಿ ಸೂತಕದ ಛಾಯೆ: ಅರ್ಚಕ ರಾಜು ನಿಧನ
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಚಾಲನೆಗೆ ಬಾನು ಮುಷ್ತಾಕ್ ಆಯ್ಕೆ ಮಾಡಿದ್ದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಚಾಲನೆಗೆ ಬಾನು ಮುಷ್ತಾಕ್ ಆಯ್ಕೆ ಮಾಡಿದ್ದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಎಲ್ಲಾ ಅಡೆತಡೆಗಳು ಮೀರಿ ನಿನ್ನೆ ದಸರಾ ಉತ್ಸವಕ್ಕೆ ವಿಧ್ಯುಕ್ತ ಚಾಲನೆಯೂ ಸಿಕ್ಕಿತ್ತು. ಆದರೆ ಇದೀಗ ಚಾಮುಂಡಿ ಬೆಟ್ಟದಲ್ಲಿ ಸೂತಕದ ಛಾಯೆ ಆವರಿಸಿದೆ. ಹೌದು... ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲದ ಅರ್ಚಕ ರಾಜು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅರ್ಚಕ ರಾಜು ನಿಧನದ ಕಾರಣ ಸದ್ಯ ಚಾಮುಂಡೇಶ್ವರಿ ದೇಗುಲದ ಗರ್ಭಗುಡಿಗೆ ತೆರೆ ಎಳೆಯಲಾಗಿದೆ. ರಾತ್ರಿ ವರೆಗೂ ಉತ್ಸವಮೂರ್ತಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಇಂದು ರಾತ್ರಿವರೆಗೂ ಮೂಲ ವಿಗ್ರಹದ ದರ್ಶನ ಇರುವುದಿಲ್ಲ. ಅರ್ಚಕನ ನಿಧನದಿಂದಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ತೊಡಕಾಗಿದೆ. ಆದಾಗ್ಯೂ, ದಸರಾ ಉತ್ಸವಕ್ಕೆ ಇದರಿಂದ ಯಾವುದೇ ಅಡಚಣೆ ಆಗುವುದಿಲ್ಲ. ಕೆಲವು ವಿಧಿವಿಧಾನಗಳ ನಂತರ ಗರ್ಭಗುಡಿ ಬಾಗಿಲು ತೆರೆಯಲಿದೆ. ನವರಾತ್ರಿ ಪೂಜೆಗಳು ಮಾಮೂಲಿಯಂತೆಯೇ ನಡೆಯಲಿವೆ ಎಂದು ದೇಗುಲದ ಮೂಲಗಳು ತಿಳಿಸಿವೆ.

ಬೆಂಗಳೂರು ಕಾಲ್ತುಳಿತ ಬೆನ್ನಲ್ಲೇ ಸುರಕ್ಷತೆಗೆ ಸರ್ಕಾರ ಆದ್ಯತೆ: ಜಂಬೂ ಸವಾರಿ ಆಸನ ಸಾಮರ್ಥ್ಯ ಇಳಿಕೆಗೆ ನಿರ್ಧಾರ..!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


