ಬೆಂಗಳೂರಿನ ರಸ್ತೆಗಳ ಗುಂಡಿಗಳಿಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ: ಡಿ.ಕೆ ಶಿವಕುಮಾರ್
ಬಿಜೆಪಿ ಎಂದಿಗೂ ಸಂತೋಷವಾಗಿಲ್ಲ. ಈ ಎಲ್ಲಾ ಗುಂಡಿಗಳಿಗೂ ಬಿಜೆಪಿ ಆಡಳಿತವೇ ಕಾರಣ. ಕರ್ನಾಟಕದ ಕೆಟ್ಟ ರಸ್ತೆಗಳಿಗೆ ಬಿಜೆಪಿಯೇ ಕಾರಣ ಎಂದರು.

ಪಾಟ್ನಾ: ಬೆಂಗಳೂರಿನ ಹದಗೆಟ್ಟ ರಸ್ತೆಗುಂಡಿಗಳಿಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ದೂಷಿಸಿದ್ದಾರೆ.
ಪಾಟ್ನಾದಲ್ಲಿ ಮಾತನಾಡಿದ ಅವರು, ಬಿಜೆಪಿ ಎಂದಿಗೂ ಸಂತೋಷವಾಗಿಲ್ಲ. ಈ ಎಲ್ಲಾ ಗುಂಡಿಗಳಿಗೂ ಬಿಜೆಪಿ ಆಡಳಿತವೇ ಕಾರಣ. ಕರ್ನಾಟಕದ ಕೆಟ್ಟ ರಸ್ತೆಗಳಿಗೆ ಬಿಜೆಪಿಯೇ ಕಾರಣ ಎಂದರು.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಭಾಗವಹಿಸಲು ಕರ್ನಾಟಕದ ಉಪಮುಖ್ಯಮಂತ್ರಿ ಪಾಟ್ನಾದಲ್ಲಿದ್ದಾರೆ. ದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ನಿವಾಸಕ್ಕೆ ಹೋಗುವ ರಸ್ತೆಯಲ್ಲೂ ಗುಂಡಿಗಳಿವೆ ಎಂದಿದ್ದರು.
ಬೆಂಗಳೂರಿನಾದ್ಯಂತ ಪ್ರತಿದಿನ ಸುಮಾರು 1,000 ಗುಂಡಿಗಳನ್ನು ಸಂಘಟಿತ ಪ್ರಯತ್ನಗಳ ಮೂಲಕ ಮುಚ್ಚಲಾಗುತ್ತಿದೆ ಎಂದು ಅವರು ಹೇಳಿದರು. ನಗರದಲ್ಲಿನ ಗುಂಡಿಗಳ ಬಗ್ಗೆ ಕೆಲವು ಕೈಗಾರಿಕೋದ್ಯಮಿಗಳು ಕಳವಳ ವ್ಯಕ್ತಪಡಿಸಿದ ನಂತರ ಈ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಬೆಂಗಳೂರನ್ನು "ಗುಂಡಿಗಳ ನಗರ" ಎಂದು ಜರಿದಿದ್ದರು.

ದೇಶದಾದ್ಯಂತ ರಸ್ತೆ ಗುಂಡಿ ಸಮಸ್ಯೆ ಇದೆ, ಕರ್ನಾಟಕದಲ್ಲಿ ಮಾತ್ರ ಎಂದು ಬಿಂಬಿಸುವುದು ಸರಿಯಲ್ಲ: ಡಿ.ಕೆ ಶಿವಕುಮಾರ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


