IT Raid: ಅಕ್ರಮ ಆಸ್ತಿ ಗಳಿಕೆ-ತೆರಿಗೆ ವಂಚನೆ; ಬೆಂಗಳೂರಿನ ಪ್ರತಿಷ್ಠಿತ PES ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ
ಆದಾಯ ಮೀರಿ ಅಕ್ರಮ ಅಸ್ತಿಗಳಿಕೆ ಹಾಗೂ ತೆರಿಗೆ ವಂಚನೆ ಆರೋಪದ ಹಿನ್ನೆಲೆ ಬೆಂಗಳೂರಿನ ಪ್ರತಿಷ್ಠಿತ ಪಿಇಎಸ್ (PES) ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿದೆ.

ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ದಾಳಿ ಮುಂದುವರಿದಿದೆ. ಆದರೆ ಈ ಬಾರಿ ದಾಳಿ ನಡೆದಿರುವುದು ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳ ಮೇಲೆ.
ಆದಾಯ ಮೀರಿ ಅಕ್ರಮ ಅಸ್ತಿಗಳಿಕೆ ಹಾಗೂ ತೆರಿಗೆ ವಂಚನೆ ಆರೋಪದ ಹಿನ್ನೆಲೆ ಬೆಂಗಳೂರಿನ ಪ್ರತಿಷ್ಠಿತ ಪಿಇಎಸ್ (PES) ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ (IT Raid) ನಡೆದಿದೆ. ಇಂದು ಬೆಳ್ಳಂ ಬೆಳಗ್ಗೆಯೇ ಬೆಂಗಳೂರಿನ PES ಕಾಲೇಜುಗಳು (PES Collage) ಸೇರಿದಂತೆ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಕಾಲೇಜಿನ ಮಾಲೀಕರ ಮೇಲೆ ದಾಳಿ
ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದಂತೆ ಕಾಲೇಜಿನ ಮಾಲೀಕರು, ಆಡಳಿತ ಮಂಡಳಿಯವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಹನುಮಂತನಗರ ಸೇರಿದಂತೆ ಕೆಲ ಕಡೆಗಳ ದಾಳಿ ನಡೆದಿದೆ.
ಹೊರ ರಾಜ್ಯಗಳ ಶಾಖೆ ಮೇಲೂ ದಾಳಿ
ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು, ಎಲೆಕ್ಟ್ರಾನಿಕ್ ಸಿಟಿ ಕಾಲೇಜ್, ಹನುಮಂತನಗರ ಕಾಲೇಜ್, ಆಂಧ್ರದ ಕುಪ್ಪಂ ಕಾಲೇಜ್ ಸೇರಿದಂತೆ ರಾಜ್ಯ ಹಾಗೂ ಹೊರ ರಾಜ್ಯದಲ್ಲಿರುವ ಪಿಇಎಸ್ ಶಿಕ್ಷಣ ಸಂಸ್ಥೆಯ ಶಾಖೆಗಳ ಮೇಲೆ ದಾಳಿ ನಡೆದಿದೆ.
ಬನಶಂಕರಿ ಬಿಡಿಎ ಕಾಂಪ್ಲೇಕ್ಸ್ ಬಳಿ ಪಿಇಎಸ್ ಶಿಕ್ಷಣ ಸಂಸ್ಥೆ ಮಾಜಿ ಮುಖ್ಯಸ್ಥ ದಿವಂಗತ ದೊರೆಸ್ವಾಮಿ ನಾಯ್ಡು ಮನೆ ಮೇಲೆ ದಾಳಿ ಮಾಡಲಾಗಿದೆ. ಅವರ ಮಗ ಜವಹರ್ ದೊರೆಸ್ವಾಮಿ ಅವರನ್ನು ಕೂಡ ವಿಚಾರಣೆ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ ದೊರೆಸ್ವಾಮಿ ಸಂಬಂಧಿಕರ ಮನೆ ಮೇಲೂ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಕಾಲೇಜಿನ ಹಣಕಾಸು ಲೆಕ್ಕ, ಪೀಠೋಪಕರಣಗಳ ಖರೀದಿ ಹಾಗೂ ಕಾಲೇಜು ಅಭಿವೃದ್ಧಿ ಹೆಸರಿನಲ್ಲಿ ಖರ್ಚು ಮಾಡಿರುವ ಹಣದ ಬಗ್ಗೆ ವಿವರಣೆಗಳನ್ನ ಐಟಿ ಅಧಿಕಾರಿಗಳು ಪಡೆಯುತ್ತಿದ್ದಾರೆ ಎನ್ನಲಾಗಿದೆ.
100 ಕ್ಕೂ ಹೆಚ್ಚು ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ
ಚೆನ್ನೈ, ಮಂಗಳೂರು, ಆಂಧ್ರ ಪ್ರದೇಶಗಳಿಂದ ಸುಮಾರು 100 ಕ್ಕೂ ಹೆಚ್ಚು ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆದಾಯಕ್ಕೆ ಮೀರಿದ ಆಸ್ತಿಗಳಿಕೆ ಆರೋಪ ಹಾಗೂ ತೆರಿಗೆ ವಂಚನೆ ಮಾಡಿರೋ ಆರೋಪ ಹಿನ್ನಲೆ ದಾಳಿ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



