ಕೇಂದ್ರದಿಂದ GST ಕಡಿತದ ಸಿಹಿ ಸುದ್ದಿ ನಡುವೆ, ಮತ್ತೆ ಬಸ್ ದರ ಏರಿಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು!
ದೇಸಿ ಹಾಲಿನ ಪ್ಯಾಕೆಟ್ ದರ ಏರಿಕೆ ಆಗಿರುವುದರ ನಡುವೆ ಈಗ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ ಬಂದಿದೆ.

ಬೆಂಗಳೂರು: ಒಂದೆಡೆ ಕೇಂದ್ರ ಸರ್ಕಾರ GST ಸ್ಲ್ಯಾಬ್ ಗಳನ್ನು ಇಳಿಕೆ ಮಾಡುವ ಮೂಲಕ ಜನರಿಗೆ ತೆರಿಗೆ ಹೊರೆ ಕಡಿಮೆ ಮಾಡಿದ್ದರೆ, ರಾಜ್ಯ ಸರ್ಕಾರ ಮತ್ತೊಂದು ಸುತ್ತಿನ ಬೆಲೆ ಏರಿಕೆ ಶಾಕ್ ಕೊಡಲು ಸಿದ್ಧತೆ ನಡೆಸಿದೆ.
ದೇಸಿ ಹಾಲಿನ ಪ್ಯಾಕೆಟ್ ದರ ಏರಿಕೆ ಆಗಿರುವುದರ ನಡುವೆ ಈಗ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ ಬಂದಿದೆ. ವಿದ್ಯುತ್ ದರ ಏರಿಕೆಯ ಮಾದರಿಯಲ್ಲೇ ಇನ್ನು ಮುಂದಿನ ದಿನಗಳಲ್ಲಿ ಪ್ರತಿ ವರ್ಷ ಸಾರಿಗೆ ಸಂಸ್ಥೆಗಳ ದರ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಸಮಿತಿ ರಚನೆ ಮಾಡಿದೆ.
ಸಾರಿಗೆ ದರ ನಿಯಂತ್ರಣ ಸಮಿತಿ
KERC ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ ಅಸ್ತಿತ್ವಕ್ಕೆ ಬರಲಿದೆ. ಕರ್ನಾಟಕ ಮೋಟಾರು ವಾಹನ ನಿಯಮ 1989ರ ಅಡಿಯಲ್ಲಿ ದರ ನಿಯಂತ್ರಣ ಸಮಿತಿಯನ್ನ ರಾಜ್ಯ ಸರ್ಕಾರ ರಚನೆ ಮಾಡಿದೆ. ಈ ಸಮಿತಿ ಪ್ರತಿ ವರ್ಷ ರಸ್ತೆ ಸಾರಿಗೆ ದರ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಿದೆ.
ಕಾಲಕಾಲಕ್ಕೆ ದರ ಪರಿಷ್ಕರಣೆ
ಈ ಸಮಿತಿ ಅಧ್ಯಕ್ಷರು ಹಾಗೂ ಇನ್ನಿಬ್ಬರು ಸದಸ್ಯರನ್ನು ಒಳಗೊಂಡಿದ್ದು. ಕಾಲಕಾಲಕ್ಕೆ ದರ ಪರಿಷ್ಕರಣೆ ಮಾಡಲಿದೆ. ಇಂಧನ ದರ ಹೆಚ್ಚುತ್ತಿರುವ ಹಿನ್ನೆಲೆ ದೀರ್ಘಾವಧಿಯಲ್ಲಿ ಒಂದೇ ಬಾರಿ ಪ್ರಯಾಣ ದರ ಏರಿಕೆ ಬದಲು ಪ್ರತಿ ವರ್ಷ ದರ ಪರಿಷ್ಕರಣೆ ಮಾಡುವುದು ಸಮಿತಿ ರಚನೆಯ ಹಿಂದಿನ ಉದ್ದೇಶವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



