ರಾಜ್ಯ

BJP ಅವಧಿಯಲ್ಲಿನ ಶೇ.40 ಕಮಿಷನ್ ಆರೋಪ: ತನಿಖೆಗೆ ರಚಿಸಿದ್ದ ನಾಗಮೋಹನ್ ದಾಸ್ ಆಯೋಗ ದಿಢೀರ್ ರದ್ದು!

ಆಯೋಗವು ಆಗಸ್ಟ್ 30 ರಂದು ತನ್ನ ವರದಿಯನ್ನು ಸಲ್ಲಿಸಿದ್ದು, ಸೆಪ್ಟೆಂಬರ್ 30 ರವರೆಗೆ ವಿಸ್ತರಣೆಯನ್ನು ಕೋರಿತ್ತು. ಆದರೆ, ಈ ಮನವಿಯನ್ನು ಸರ್ಕಾರ ಪರಿಗಣಿಸಿಲ್ಲ ಎಂದು ಹೇಳಲಾಗುತ್ತಿದೆ.

BJP ಅವಧಿಯಲ್ಲಿನ ಶೇ.40 ಕಮಿಷನ್ ಆರೋಪ: ತನಿಖೆಗೆ ರಚಿಸಿದ್ದ ನಾಗಮೋಹನ್ ದಾಸ್ ಆಯೋಗ ದಿಢೀರ್ ರದ್ದು!
ನಿವೃತ್ತ ನ್ಯಾ.ನಾಗಮೋಹನ್ ದಾಸ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ.
Published On :

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿ ನಾಗರೀಕ ಕಾಮಗಾರಿಗಳಲ್ಲಿ ನಡೆದ ಶೇ.40 ಕಮಿಷನ್ ಆರೋಪ ಮತ್ತು ಅಕ್ರಮಗಳ ತನಿಖೆ ನಡೆಸುತ್ತಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವನ್ನು ರಾಜ್ಯ ಸರ್ಕಾರ ದಿಢೀರ್ ರದ್ದುಗೊಳಿಸಿದೆ.

ಆಯೋಗವು ಆಗಸ್ಟ್ 30 ರಂದು ತನ್ನ ವರದಿಯನ್ನು ಸಲ್ಲಿಸಿದ್ದು, ಸೆಪ್ಟೆಂಬರ್ 30 ರವರೆಗೆ ವಿಸ್ತರಣೆಯನ್ನು ಕೋರಿತ್ತು. ಆದರೆ, ಈ ಮನವಿಯನ್ನು ಸರ್ಕಾರ ಪರಿಗಣಿಸಿಲ್ಲ ಎಂದು ಹೇಳಲಾಗುತ್ತಿದೆ.

ಆಯೋಗದ ಅಧ್ಯಕ್ಷರ ನಿರ್ದೇಶನದ ಮೇರೆಗೆ ಸದಸ್ಯ ಕಾರ್ಯದರ್ಶಿ ಸೆಪ್ಟೆಂಬರ್ 22 ರಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ತನಿಖಾ ಆಯೋಗವನ್ನು ಸೆಪ್ಟೆಂಬರ್ 23 ರಂದು ಮುಕ್ತಾಯಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಸೆಪ್ಟೆಂಬರ್ 22 ರಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ತನಿಖಾ ಆಯೋಗವನ್ನು ಸೆಪ್ಟೆಂಬರ್ 23 ರಂದು ಮುಕ್ತಾಯಗೊಳಿಸಲಾಗುವುದಾಗಿ ತಿಳಿಸಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ, ಆಯೋಗಕ್ಕೆ‌ ನೀಡಲಾಗಿದ್ದ ವಾಹನ ಹಾಗೂ ಸಿಬ್ಬಂದಿಯನ್ನು ಸರ್ಕಾರ‌ ಮಂಗಳವಾರ ಸಂಜೆಯಿಂದಲೇ ವಾಪಸ್ ಪಡೆದಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.