ರಾಜ್ಯ

ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಪ್ರಕರಣ: ಹ್ಯಾಕರ್ ಮೂಲ ಪತ್ತೆ

ಆರೋಪಿಗಳು ಬಿಹಾರದಿಂದಲೇ 4-5 ಜನರಿಂದ ಉಪೇಂದ್ರ ದಂಪತಿಯ ಮೊಬೈಲ್ ನಂಬರ್ ಹ್ಯಾಕ್ ಮಾಡಿ, ಹಣ ಕೇಳಿದ್ದು, ಸುಮಾರು 1.65 ಲಕ್ಷ ರೂ. ಹಣ ಪಡೆದುಕೊಂಡು, 4 ಅಕೌಂಟ್ ಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ.

ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಪ್ರಕರಣ: ಹ್ಯಾಕರ್ ಮೂಲ ಪತ್ತೆ
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ
Published On :

ಬೆಂಗಳೂರು: ನಟ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣದ ತನಿಖೆ ನಡೆಸುತ್ತಿರುವ ಸದಾಶಿವನಗರ ಪೊಲೀಸರು ಹ್ಯಾಕರ್‌ಗಳ ಮೂಲ ಪತ್ತೆ ಮಾಡಿದ್ದಾರೆ.

ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿರುವ ವಂಚಕರು ಬಿಹಾರ ಮೂಲದವರು ಎಂದು ತಿಳಿದುಬಂದಿದೆ.

ಆರೋಪಿಗಳು ಬಿಹಾರದಿಂದಲೇ 4-5 ಜನರಿಂದ ಉಪೇಂದ್ರ ದಂಪತಿಯ ಮೊಬೈಲ್ ನಂಬರ್ ಹ್ಯಾಕ್ ಮಾಡಿ, ಹಣ ಕೇಳಿದ್ದು, ಸುಮಾರು 1.65 ಲಕ್ಷ ರೂ. ಹಣ ಪಡೆದುಕೊಂಡು, 4 ಅಕೌಂಟ್ ಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

ಆ ನಾಲ್ಕು ಅಕೌಂಟ್ ಗಳು ಕೂಡ ನಕಲಿ ಆಗಿದ್ದು, ಅದೇ ನಂಬರ್ ಬಳಸಿ, ಅದೇ ದಿನ ತಮಿಳುನಾಡು, ಆಂಧ್ರಪ್ರದೇಶದಲ್ಲೂ ಕೆಲವರ ಮೊಬೈಲ್ ಗಳನ್ನು ಹ್ಯಾಕ್ ಮಾಡಿದ್ದಾರೆ.

ಸದ್ಯ ಸದಾಶಿವನಗರ ಪೊಲೀಸರು, ಹ್ಯಾಕರ್‌ಗಳ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿದ್ದು, ಬಿಹಾರಕ್ಕೆ ವಿಶೇಷ ತಂಡ ಕಳುಹಿಸಲು ಸಿದ್ದತೆ ನಡೆಸಿದ್ದಾರೆಂದು ತಿಳಿದಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.