ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾರ್ಯಾರಂಭ: ಡಿ.ಕೆ ಶಿವಕುಮಾರ್-ರಹೀಮ್ ಖಾನ್ ಖಾತೆಗಳಲ್ಲಿ ಬದಲಾವಣೆ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆಯ ಮೇರೆಗೆ ಖಾತೆಗಳನ್ನು ಮಾರ್ಪಡಿಸಿ ಅಧಿಸೂಚನೆ ಹೊರಡಿಸಿದ್ದಾರೆ.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾರ್ಯಾರಂಭವಾಗಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿಯೂ ಆಗಿರುವ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಮತ್ತು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಅವರ ಖಾತೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆಯ ಮೇರೆಗೆ ಖಾತೆಗಳನ್ನು ಮಾರ್ಪಡಿಸಿ ಅಧಿಸೂಚನೆ ಹೊರಡಿಸಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರ ಅಭಿವೃದ್ಧಿ ಇಲಾಖೆಗಳನ್ನು ಮೊದಲಿಗೆ ನೀಡಲಾಗಿತ್ತು. ಜೊತೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಸೇರಿದಂತೆ ಪ್ರಮುಖ ಮತ್ತು ಮಧ್ಯಮ ನೀರಾವರಿ ಮತ್ತು ಬೆಂಗಳೂರು ನಗರ ಅಭಿವೃದ್ಧಿಯನ್ನು ವಹಿಸಲಾಗಿತ್ತು.
ಇದೀಗ ಹಳೆಯ ಖಾತೆಯಾದ ಜಲಸಂಪನ್ಮೂಲ ಇಲಾಖೆ ಜೊತೆಗೆ ಬೆಂಗಳೂರು ನಗರಾಭಿವೃದ್ಧಿ (ಬೆಂಗಳೂರು ಪಟ್ಟಣ ಯೋಜನೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ 5 ನಗರ ನಿಗಮಗಳು ಮತ್ತು ಬೆಂಗಳೂರು ನಗರ ಜಿಲ್ಲೆಯ ಅಡಿಯಲ್ಲಿ ಬರುವ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಬಿಡಿಎ, ಬಿಡಬ್ಲ್ಯೂಎಸ್ಎಸ್‌ಬಿ ನೀಡಲಾಗಿದೆ.
ಹಾಗೆಯೇ ರಹೀಮ್ ಖಾನ್ ಅವರಿಗೆ ಪೌರಾಡಳಿತ ಹಾಗೂ ಹಜ್ ಖಾತೆ ಉಳಿದಿದ್ದರೂ ಬೆಂಗಳೂರು ನಗರ ಜಿಲ್ಲೆಯ ಅಡಿಯಲ್ಲಿ ಬರುವ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಜವಾಬ್ದಾರಿ ಡಿ ಕೆ ಶಿವಕುಮಾರ್ ಅವರ ಪಾಲಾಗಿದೆ.
ಮುಖ್ಯಮಂತ್ರಿಯವರ ಸಲಹೆಯ ಮೇರೆಗೆ ಇಬ್ಬರು ಸಚಿವರಿಗೆ ಸಂಬಂಧಿಸಿದಂತೆ, ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರದ ವ್ಯವಹಾರದಲ್ಲಿ ಅಸ್ತಿತ್ವದಲ್ಲಿರುವ ಖಾತೆಗಳನ್ನು ಮಾರ್ಪಡಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ರಾಜ್ಯಪಾಲರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



