Karnataka Rains: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರಾವಳಿ ಭಾಗದಲ್ಲಿ ಚಂಡಮಾರುತ ಭೀತಿ; ರಾಜ್ಯಾದ್ಯಂತ ಅಕ್ಟೋಬರ್ 4ರವರೆಗೆ ಮಳೆ
ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ ಮತ್ತು ಬಲವಾದ ಗಾಳಿಯೊಂದಿಗೆ ಚಂಡಮಾರುತದ ಸಾಧ್ಯತೆಯಿದೆ.

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇಂದಿನಿಂದ ಭಾರಿ ಮಳೆ, ಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿಯ ಮಂಗಳೂರು, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಕರ್ನಾಟಕದಾದ್ಯಂತ ಇಂದಿನಿಂದ 6 ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಚಂಡಮಾರುತ
ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ ಮತ್ತು ಬಲವಾದ ಗಾಳಿಯೊಂದಿಗೆ ಚಂಡಮಾರುತದ ಸಾಧ್ಯತೆಯಿದೆ. ಮಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಗಂಟೆಗೆ 50ರಿಂದ 60 ಕಿ.ಮೀ ವೇಗದ ಗಾಳಿ ಮತ್ತು ಮಳೆ ಮುಂದುವರಿಯಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಈ ಭಾಗದಲ್ಲಿ ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ವರುಣನ ಆರ್ಭಟ ಕೊಂಚ ಕಡಿಮೆಯಾಗಲಿದ್ದು, ಚದುರಿದ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡ ಕವಿದ ಹವಾಮಾನ ಮುಂದುವರಿಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



