ಬಾಗಲಕೋಟೆ: ಬೀಳಗಿಯ ಅನಗವಾಡಿ ಬ್ರಿಡ್ಜ್ ಬಳಿ ಭೀಕರ ಅಪಘಾತ; ಇಬ್ಬರು ಸಾವು, ಮೂವರು ಗಂಭೀರ ಗಾಯ
ಊಟಕ್ಕೆಂದು ಸಮೀಪದ ವಿಜಯಪುರ ಜಿಲ್ಲೆಯ ಕೊಲ್ಹಾರಕ್ಕೆ ತೆರಳಿದ್ದ ಐವರಿದ್ದ ಟಂಟಂ ವಾಹನ ತಡರಾತ್ರಿ ಬಾಗಲಕೋಟೆ ಕಡೆಗೆ ವಾಪಸ್ ಹೊರಟಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇನ್ನೋವಾ ಕಾರು ಮತ್ತು ಟಂಟಂ ವಾಹನಗಳ ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದೆ.
ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹೇಶ್ ನಾಯ್ಕರ್ (27ವ) ಮತ್ತು ಮೆಹಬೂಬ್ ಶೇಖ್ (30ವ) ಮೃತ ದುರ್ದೈವಿಗಳು. ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೋವಾ ಚಾಲಕನ ಅಜಾಗರೂಕತೆ
ಊಟಕ್ಕೆಂದು ಸಮೀಪದ ವಿಜಯಪುರ ಜಿಲ್ಲೆಯ ಕೊಲ್ಹಾರಕ್ಕೆ ತೆರಳಿದ್ದ ಐವರಿದ್ದ ಟಂಟಂ ವಾಹನ ತಡರಾತ್ರಿ ಬಾಗಲಕೋಟೆ ಕಡೆಗೆ ವಾಪಸ್ ಹೊರಟಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮಹೇಶ್ ನಾಯ್ಕರ್ (27ವ) ಮತ್ತು ಮೆಹಬೂಬ್ ಶೇಖ್ (30ವ) ಮೃತ ದುರ್ದೈವಿಗಳು. ವಿಶಾಲ್ ವರತಿಲ್ಲೆ, ವಿಜಯಕುಮಾರ್ ಭೋವಿ, ಗುರುಪ್ರಸಾದ್ ಸುಂಕದ ಗಾಯಾಳುಗಳಾಗಿದ್ದಾರೆ. ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



