ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 3 ವರ್ಷ ವಯೋಮಿತಿ ಸಡಿಲಿಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ನಡೆಸುವ ನೇರ ನೇಮಕಾತಿಯಲ್ಲಿ ಭಾಗವಹಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ.

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ದಸರಾ ಬಂಪರ್ ಗಿಫ್ಟ್ ನೀಡಿದ್ದು, ಸಿವಿಲ್ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಸೋಮವಾರ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ನಡೆಸುವ ನೇರ ನೇಮಕಾತಿಯಲ್ಲಿ ಭಾಗವಹಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.
ಇತ್ತೀಚೆಗೆ ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು 5 ವರ್ಷ ವಯೋಮಿತಿ ಸಡಿಲಿಕೆ ಹಾಗೂ ಪಿಎಸ್‌ಐ/ಕಾನ್ಸಟೇಬಲ್ ಹುದ್ದೆಗಳಿಗೆ ನೇಮಕಾತಿ ಆದೇಶಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು. ಇದರ ಮಧ್ಯೆ ಇದೇ ತಿಂಗಳ 6ರಂದು ರಾಜ್ಯ ಸರ್ಕಾರ ಸಿವಿಲ್ ಹುದ್ದೆಗಳ ನೇರ ನೇಮಕಾತಿಗಳಿಗೆ 2 ವರ್ಷ ಸಡಿಲಿಕೆ ಮಾಡಿ ಆದೇಶಿಸಿತ್ತು. ಇದೀಗ 3 ವರ್ಷಗಳ ಸಡಿಲಿಕೆ ಮಾಡಿದೆ.

ಈ ವಯೋಮಿತಿ ಸಡಿಲಿಕೆ 2027 ರ ಡಿಸೆಂಬರ್ 31ರೊಳಗೆ ಸರ್ಕಾರ ಹೊರಡಿಸುವ ಎಲ್ಲ ನೇರ ನೇಮಕಾತಿಗಳಿಗೂ ಒಂದು ಬಾರಿ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೂ ಅನ್ವಯಿಸಲಿದೆ.
ವಯೋಮಿತಿ ಸಡಿಲಿಕೆ ಎಷ್ಟು?
ಸಾಮಾನ್ಯ ವರ್ಗ – 35 ವರ್ಷದಿಂದ 38 ವರ್ಷ
ಒಬಿಸಿ – 38 ವರ್ಷದಿಂದ 41 ವರ್ಷ
ಎಸ್‌ಸಿ/ಎಸ್‌ಟಿ/ಪ್ರವರ್ಗ-1 – 40 ವರ್ಷದಿಂದ 43 ವರ್ಷ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



