ಗೃಹ ಸಚಿವ ಪರಮೇಶ್ವರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: FIR ದಾಖಲು
‘ಹಿಂದೂ ಜಾಗೃತನಾಗು’ ಹೆಸರಿನ ‘ಎಕ್ಸ್’ ಖಾತೆಯಲ್ಲಿ ಈ ಆಕ್ಷೇಪಾರ್ಹ ಪೋಸ್ಟ್ ಹಾಕಲಾಗಿತ್ತು. ಇದರ ಬೆನ್ನಲ್ಲೇ ಆರೋಪಿಗಳ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿರುವ ಸೈಬರ್ ಠಾಣೆಯ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ ಅವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿರುವ ವಿಚಾರವಾಗಿ ಸೈಬರ್ ಅಪರಾಧ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪರಮೇಶ್ವರ್ ಅವರಿಗೆ ಸಂಬಂಧಿಸಿದ ನೆಲಮಂಗಲ ತಾಲ್ಲೂಕಿನ ಟಿ. ಬೇಗೂರುದಲ್ಲಿರುವ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಘಟನೆಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿತ್ತು.
‘ಹಿಂದೂ ಜಾಗೃತನಾಗು’ ಹೆಸರಿನ ‘ಎಕ್ಸ್’ ಖಾತೆಯಲ್ಲಿ ಈ ಆಕ್ಷೇಪಾರ್ಹ ಪೋಸ್ಟ್ ಹಾಕಲಾಗಿತ್ತು. ಇದರ ಬೆನ್ನಲ್ಲೇ ಆರೋಪಿಗಳ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿರುವ ಸೈಬರ್ ಠಾಣೆಯ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಪರಮೇಶ್ವರ ಒಡೆತನದ ಸಿದ್ದಾರ್ಥ ಮೆಡಿಕಲ್ ಕಾಲೇಜಿನ ತರಗತಿಯಲ್ಲಿ ಎಲ್ಲ ಸಹ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಪ್ರಾಧ್ಯಾಪಕ ಅಬ್ದುಲ್ ಅವರು ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರಾಧ್ಯಾಪಕನಿಗೆ ಥಳಿಸಿದ್ದರು. ಅಲ್ಲದೇ ವಿದ್ಯಾರ್ಥಿನಿಯೂ ಚಪ್ಪಲಿ ಏಟು ನೀಡಿದ್ದರು. ಈ ಘಟನೆಯ ಬಳಿಕ ಪರಮೇಶ್ವರ ಅವರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



