ಪೆಟ್ರೋಲ್-ಡಿಸೇಲ್ ಕೊರತೆ ಆತಂಕ: ಮನೆಯಲ್ಲಿ ಸಂಗ್ರಹಿಸಿದ್ದ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ; ಮಹಿಳೆಗೆ ಗಂಭೀರ ಗಾಯ
ಪೆಟ್ರೋಲ್ ಅಭಾವ ಆಗಿದೆ ಎಂಬ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ 10 ಲೀಟರ್ ಪೆಟ್ರೋಲ್'ನ್ನು ಕ್ಯಾನ್‌ನಲ್ಲಿ ಸಂಗ್ರಹಿಸಿ, ಮನೆಯ ಫ್ರಿಡ್ಜ್ ಬಳಿ ಇಡಲಾಗಿತ್ತು.

ಬೆಂಗಳೂರು: ಪೆಟ್ರೋಲ್-ಡಿಸೇಲ್ ಕೊರತೆಯಾಗುವ ಆತಂಕದಲ್ಲಿ ಮನೆಯಲ್ಲಿ ಸಂಗ್ರಹಿಸಿದ್ದ ಪೆಟ್ರೋಲ್ ಕ್ಯಾನ್'ಗೆ ಬೆಂಕಿ ಹೊತ್ತಿಕೊಂಡು, ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ಆವರಿಸಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಹರಿಜನಕೇರಿ ಓಣಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಪೂರ್ಣಿಮಾ ಕಲ್ಲಪ್ಪ ಹಾದಿಮನಿ (32) ಎಂಬ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಶೇ.80 ರಷ್ಟು ದೇಹ ಸುಟ್ಟಿರುವ ಕಾರಣ ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.
ಪೆಟ್ರೋಲ್ ಅಭಾವ ಆಗಿದೆ ಎಂಬ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ 10 ಲೀಟರ್ ಪೆಟ್ರೋಲ್'ನ್ನು ಕ್ಯಾನ್‌ನಲ್ಲಿ ಸಂಗ್ರಹಿಸಿ, ಮನೆಯ ಫ್ರಿಡ್ಜ್ ಬಳಿ ಇಡಲಾಗಿತ್ತು. ಪೂರ್ಣಿಮಾ ಅಡುಗೆ ಮನೆಯಲ್ಲಿದ್ದಾಗ ಏಕಾಏಕಿ ಕ್ಯಾನ್‌ಗೆ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡಿದ್ದು, ಇಡೀ ಮನೆಗೆ ಬೆಂಕಿ ಆವರಿಸಿದೆ.
ಅಡುಗೆ ಮನೆಯಲ್ಲಿ ಸಿಲುಕಿದ್ದ ಅತ್ತಿಗೆಯನ್ನು ಮೈದುನ ಯಲ್ಲಪ್ಪ ಕಾಪಾಡಿದ್ದು, ಈ ವೇಳೆ ಅವನಿಗೂ ಗಾಯಗಳಾಗಿವೆ. ಆದರೆ, ಮಹಿಳೆಯ ಸ್ಥಿತಿ ಮಾತ್ರ ಗಂಭೀರವಾಗಿದೆ.
ಈ ವೇಳೆ ಮನೆಯ ಸದಸ್ಯರು ಹೊರಗಡೆ ಕುಳಿತಿದ್ದರಿಂದ ಪಾರಾಗಿದ್ದಾರೆ. ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಸದ್ಯ ಗರಗ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



