ರಾಜ್ಯ

ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ: ಚಿತ್ರದುರ್ಗ ವಿದ್ಯಾರ್ಥಿನಿ ನೇಣಿಗೆ ಶರಣು!

ಆತ್ಮಹತ್ಯೆಗೂ ಮುನ್ನ ಲಿಖಿತಾ ಬರೆದಿಟ್ಟಿರುವ ಡೆತ್ ನೋಟ್‌ನಲ್ಲಿ ಪ್ರಾಧ್ಯಾಪಕ ಡಾ. ರಾಜು, ಅವರ ಪತ್ನಿ ನಿಶಾ ಹಾಗೂ ಕೆಲವು ವಿದ್ಯಾರ್ಥಿನಿಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ: ಚಿತ್ರದುರ್ಗ ವಿದ್ಯಾರ್ಥಿನಿ ನೇಣಿಗೆ ಶರಣು!
ನಿಖಿತಾ
Published On :

ಚಿತ್ರದುರ್ಗ: ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಹಿನ್ನೆಲೆಯಲ್ಲಿ ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ನಗರದ ಬಸವ ಲೇಔಟ್‌ನಲ್ಲಿ ನಡೆದಿದೆ.

ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್‌ನ ಮನೆಯಲ್ಲಿ ಲಿಖಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಧ್ಯಾಪಕ ಡಾ. ರಾಜು ಅವರೊಂದಿಗೆ ಸಂಬಂಧವಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿ, ತನ್ನ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದರಿಂದ ನೊಂದಿದ್ದ ವಿದ್ಯಾರ್ಥಿನಿ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೂ ಮುನ್ನ ಲಿಖಿತಾ ಬರೆದಿಟ್ಟಿರುವ ಡೆತ್ ನೋಟ್‌ನಲ್ಲಿ ಪ್ರಾಧ್ಯಾಪಕ ಡಾ. ರಾಜು, ಅವರ ಪತ್ನಿ ನಿಶಾ ಹಾಗೂ ಕೆಲವು ವಿದ್ಯಾರ್ಥಿನಿಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಇವರ ಕಿರುಕುಳ ಮತ್ತು ಅಪಪ್ರಚಾರವೇ ನನ್ನ ಸಾವಿಗೆ ಕಾರಣ ಎಂದು ಅವರು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.