ಹಾವು ಕಡಿತದಿಂದ ಮೂರು ವರ್ಷಗಳಲ್ಲಿ 277 ಮಂದಿ ಸಾವು: ದೇಶದಲ್ಲಿ ಕರ್ನಾಟಕದಲ್ಲೇ ಅತಿ ಹೆಚ್ಚು!
2023 ರಲ್ಲಿ 183ಗಳಿದ್ದ ಹಾವು ಕಡಿತ ಪ್ರಕರಣಗಳು 2024ರಲ್ಲಿ 370ಕ್ಕೆ, 2025ರಲ್ಲಿ 431ಕ್ಕೆ ಏರುವುದರೊಂದಿಗೆ ಎರಡು ವರ್ಷಗಳಲ್ಲಿ ದುಪ್ಪಟ್ಟು ಹೆಚ್ಚಾಗಿದೆ.

ಶಿವಮೊಗ್ಗ/ ನವದೆಹಲಿ: 2024 ಮತ್ತು 2025 ಎರಡರಲ್ಲೂ ಕರ್ನಾಟಕದಲ್ಲಿ ಹಾವು ಕಡಿತದಿಂದ ಅತಿ ಹೆಚ್ಚು ಮಂದಿ ಸಾವನಪ್ಪಿದ್ದಾರೆ. ದೇಶದಲ್ಲಿಯೇ ಅತಿ ಹೆಚ್ಚಿನ ಮಂದಿ ಕರ್ನಾಟಕದಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ (IDSP) ಅಡಿಯಲ್ಲಿ 2023 ರಲ್ಲಿ 183ಗಳಿದ್ದ ಹಾವು ಕಡಿತ ಪ್ರಕರಣಗಳು 2024ರಲ್ಲಿ 370ಕ್ಕೆ, 2025ರಲ್ಲಿ 431ಕ್ಕೆ ಏರುವುದರೊಂದಿಗೆ ಎರಡು ವರ್ಷಗಳಲ್ಲಿ ದುಪ್ಪಟ್ಟು ಹೆಚ್ಚಾಗಿದೆ. ಹಳ್ಳಿಗಳಲ್ಲಿ ಸಂಭವಿಸುವ ಅನೇಕ ಹಾವು ಕಡಿತದ ಸಾವುಗಳು ಸಂಪೂರ್ಣವಾಗಿ ವರದಿಯಾಗಿಲ್ಲ. ಏಕೆಂದರೆ ಸಂತ್ರಸ್ತರು ಆಸ್ಪತ್ರೆಗೆ ತಲುಪುವಷ್ಟರಲ್ಲಿಯೇ ಸಾವನ್ನಪ್ಪಿರುತ್ತಾರೆ.
ಲೋಕಸಭೆಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್, ಹಾವು ಕಡಿತವನ್ನು ಆಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಡಿ ಅಧಿಸೂಚಿತ ಕಾಯಿಲೆ ಎಂದು ಸಚಿವಾಲಯವು ಸೂಚನೆ ನೀಡಿದೆ ಎಂದು ಹೇಳಿದರು.
ಸಮಗ್ರ ಆರೋಗ್ಯ ಮಾಹಿತಿ ಪೋರ್ಟಲ್ (IHIP) ಮೂಲಕ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದಿಂದ (IDSP) ಪಡೆದ ಅಂಕಿಅಂಶಗಳ ಪ್ರಕಾರ, ಕರ್ನಾಟಕದಲ್ಲಿ 2023 ರಲ್ಲಿ ಹಾವು ಕಡಿತದಿಂದ 19 ಮಂದಿ ಸಾವನ್ನಪ್ಪಿದ್ದರೆ, 2024 ರಲ್ಲಿ 101 ಮತ್ತು 2025 ರಲ್ಲಿ 157 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೂರು ವರ್ಷಗಳಲ್ಲಿ ಮೃತಪಟ್ಟವರ ಸಂಖ್ಯೆ 277ಕ್ಕೆ ಏರಿಕೆಯಾಗಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗಿಂತ ಅತ್ಯಂತ ಹೆಚ್ಚಿನ ಮಂದಿ ಕರ್ನಾಟಕದಲ್ಲಿ ಸಾವನ್ನಪ್ಪಿರುವುದಾಗಿ ವರದಿಯಲ್ಲಿ ಹೇಳಲಾಗಿದೆ.
ಇದೇ ಅವಧಿಯಲ್ಲಿ ಪಶ್ಚಿಮ ಬಂಗಾಳದಲ್ಲಿ 153 ಮಂದಿ ಸಾವನ್ನಪ್ಪಿರುವುದರೊಂದಿಗೆ ಎರಡನೇ ಸ್ಥಾನದಲ್ಲಿದೆ. ತಮಿಳುನಾಡಿನಲ್ಲಿ 2023ರಲ್ಲಿ 43 ಮಂದಿ, 2024ರಲ್ಲಿ 25, 2025ರಲ್ಲಿ 27 ಮಂದಿ ಮೃತಪಟ್ಟಿದ್ದಾರೆ. ಕರ್ನಾಟಕದ 2023 ರಿಂದ 2025 ರವರೆಗೆ ಮೃತಪಟ್ಟವರ ಸಂಖ್ಯೆಯಲ್ಲಿ ಸುಮಾರು ಮೂರು ಪಟ್ಟು ಹೆಚ್ಚಾಗಿದೆ .

ಶಾಲಾ ಆವರಣದಲ್ಲಿ ಊಟ ಮಾಡುತ್ತಿದ್ದ ವಿದ್ಯಾರ್ಥಿಗೆ ಹಾವು ಕಡಿತ: ಸಿನಿಮೀಯ ಶೈಲಿಯಲ್ಲಿ ವಿಷ ಹೀರಿ ಬದುಕಿಸಿದ ಶಿಕ್ಷಕ..!
ಅರಣ್ಯ ಪ್ರದೇಶ ಮತ್ತು ವಿಷಕಾರಿ ಪ್ರಭೇದಗಳ ಸಾಂದ್ರತೆ ಎರಡೂ ಗಣನೀಯವಾಗಿರುವ ಕರ್ನಾಟಕದಲ್ಲಿ ಅತಿ ಹೆಚ್ಚು ಮಂದಿ ಹಾವು ಕಡಿತದಿಂದ ಸಾವನ್ನಪ್ಪಿರುವುದು ಹೆಚ್ಚಿನ ಕಳವಳಕ್ಕೆ ಕಾರಣವಾಗಿದೆ. ಆವಾಸಸ್ಥಾನದ ವಿಘಟನೆ ಮತ್ತು ಕುಗ್ಗುತ್ತಿರುವ ಅರಣ್ಯ ಬಫರ್‌ಗಳು ಶೇಷವಾಗಿ ಪಶ್ಚಿಮ ಘಟ್ಟಗಳ ಗಡಿಯಲ್ಲಿರುವ ಜಿಲ್ಲೆಗಳು ಮತ್ತು ಮಲೆನಾಡು ಪ್ರದೇಶದಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಪರಿಸರ ಸಂರಕ್ಷರು ಹೇಳುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


