RDPR ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಆಹ್ವಾನ; ವೇತನ, ಅರ್ಜಿ ಸಲ್ಲಿಕೆ ಅಂತಿಮ ದಿನಾಂಕದ ಬಗ್ಗೆ ಇಲ್ಲಿದೆ ಮಾಹಿತಿ
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು ಮಾರ್ಚ್ 1, 2026 ರ ಅನ್ವಯ 66 ವರ್ಷಗಳ ಒಳಗೆ ಇರಬೇಕು.

ಬೆಂಗಳೂರು: ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ (RDPR) ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
2026ನೇ ಸಾಲಿನ ಓಂಬುಡ್ಸ್‌ಮನ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಪದವೀಧರರು, 66 ವರ್ಷದೊಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಮಾಸಿಕ ಕನಿಷ್ಠ 10,000 ರಿಂದ ಗರಿಷ್ಠ 45,000 ರೂ. ವೇತನ ಇರುವ ಹುದ್ದೆಗಳಾಗಿದ್ದು, ಆಫ್‌ಲೈನ್ ಮೂಲಕ ಏಪ್ರಿಲ್ 24ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹತೆಗೆ ಮಾನದಂಡಗಳೇನು?; ವೇತನ ಎಷ್ಟು?
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು ಮಾರ್ಚ್ 1, 2026 ರ ಅನ್ವಯ 66 ವರ್ಷಗಳ ಒಳಗೆ ಇರಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ಅನುಭವ ಮತ್ತು ಇಲಾಖೆಯ ಮಾನದಂಡಗಳ ಆಧಾರದ ಮೇಲೆ ಮಾಸಿಕ 10,000 ರೂ.ಗಳಿಂದ 45,000 ರೂ.ಗಳವರೆಗೆ ವೇತನ ಲಭ್ಯವಿರಲಿದೆ.
ಅರ್ಜಿ ಸಲ್ಲಿಕೆ ಹಾಗೂ ವಿಳಾಸ
ಅರ್ಹ ಅಭ್ಯರ್ಥಿಗಳು ಆಫ್‌ಲೈನ್ (Offline) ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಅರ್ಜಿಯ ಜೊತೆಗೆ ಶೈಕ್ಷಣಿಕ ದಾಖಲೆಗಳು, ವಯಸ್ಸಿನ ಪುರಾವೆ, ಅನುಭವದ ಪತ್ರ (ಇದ್ದಲ್ಲಿ) ಮತ್ತು ಇತ್ತೀಚಿನ ಭಾವಚಿತ್ರ ಸೇರಿದಂತೆ ಅಗತ್ಯವಿರುವ ಎಲ್ಲಾ ಮಾಹಿತಿ ಹಾಗೂ ಸ್ವಯಂ-ದೃಢೀಕರಿಸಿದ ದಾಖಲೆಗಳನ್ನು ಲಗತ್ತಿಸಬೇಕಾಗುತ್ತದೆ. ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು:
ವಿಳಾಸ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ಸಂಖ್ಯೆ: 1234, ಕೆಎಸ್‌ಐಐಡಿಸಿ ಕಟ್ಟಡ, ಐಟಿ ಪಾರ್ಕ್ ಸೌತ್ ಬ್ಲಾಕ್, ರಾಜಾಜಿನಗರ ಕೈಗಾರಿಕಾ ಎಸ್ಟೇಟ್, ಬೆಂಗಳೂರು – 560010.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



