ಶಿರಸಿ ಬಳಿ ಭೀಕರ ಅಪಘಾತ: ಎರಡು ಬಸ್'ಗಳು ಮುಖಾಮುಖಿ ಡಿಕ್ಕಿ, 40ಕ್ಕೂ ಹೆಚ್ಚು ಜನರಿಗೆ ಗಾಯ
ಕುಮಟಾ–ಶಿರಸಿ ಹೆದ್ದಾರಿಯ ಕೊಲಗಿಬೀಸ್ ಗ್ರಾಮದಲ್ಲಿ ಬಳಿ ವೇಗವಾಗಿ ಸಂಚರಿಸುತ್ತಿದ್ದ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿವೆ.

ಶಿರಸಿ (ಉತ್ತರ ಕನ್ನಡ): ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 40 ಮಂದಿ ಗಾಯಗೊಂಡಿದ್ದಾರೆ.
ಕುಮಟಾ–ಶಿರಸಿ ಹೆದ್ದಾರಿಯ ಕೊಲಗಿಬೀಸ್ ಗ್ರಾಮದಲ್ಲಿ ಬಳಿ ವೇಗವಾಗಿ ಸಂಚರಿಸುತ್ತಿದ್ದ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿವೆ.
ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಕುಮಟಾದಿಂದ ಶಿರಸಿಗೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆ ಸ್ಥಳೀಯ ನಿವಾಸಿಗಳನ್ನು ಬೆಚ್ಚಿಬೀಳಿಸಿದೆ, ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಭಾರೀ ಸದ್ದು ಕೇಳುತ್ತಿದ್ದಂತೆ ಸ್ಥಳೀಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸ್ಥಳದಲ್ಲಿ ಗಾಯಗೊಂಡವರ ಗೋಳಾಟ, ಕಿರುಚಾಟ ಮತ್ತು ಸಹಾಯಕ್ಕಾಗಿ ಕೂಗುತ್ತಿರುವುದು ಕಂಡು ಕೂಡಲೇ ರಕ್ಷಣೆಗೆ ಧಾವಿಸಿದ್ದಾರೆ.
ಶಿರಸಿ ಪೊಲೀಸರು ಸ್ಥಳಕ್ಕೆ ತ್ವರಿತವಾಗಿ ತಲುಪಿ ಆಂಬ್ಯುಲೆನ್ಸ್‌ಗಳಿಗೆ ವ್ಯವಸ್ಥೆ ಮಾಡಿದರು ಎಂದು ಪ್ರತ್ಯಕ್ಷದರ್ಶಿ ಮಂಜುನಾಥ್ ನಾಯಕ್ ಅವರು ಹೇಳಿದ್ದಾರೆ.
ಈ ಅಪಘಾತದಿಂದ ಹೊಸದಾಗಿ ನಿರ್ಮಿತ ರಸ್ತೆಯಲ್ಲಿ ಸಂಚಾರಕ್ಕೆ ಭಾರೀ ಅಡಚಣೆ ಉಂಟಾಗಿ, ಹಲವು ಕಿಲೋಮೀಟರ್‌ಗಳಷ್ಟು ವಾಹನಗಳು ಸಾಲಾಗಿ ನಿಂತಿದ್ದವು. ನಂತರ ಅಪಘಾತಕ್ಕೀಡಾದ ಬಸ್‌ಗಳನ್ನು ರಸ್ತೆ ಬದಿಗೆ ಸರಿಸಲಾಯಿತು. ಬಳಿಕ ಸಂಚಾರ ಸುಗಮಗೊಂಡಿತು.
ಶಿರಸಿ ಉಪವಿಭಾಗ ಪೊಲೀಸ್ ಅಧಿಕಾರಿ ಗೀತಾ ಪಾಟೀಲ್ ಮಾಹಿತಿ ನೀಡಿ, “ಅಪಘಾತದ ನಿಖರ ಕಾರಣ ತನಿಖೆಯ ಬಳಿಕ ತಿಳಿಯಲಿದೆ. ವೇಗವೇ ಕಾರಣವಾಗಿರಬಹುದು ಎಂಬ ಅನುಮಾನವಿದೆ. ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



