ರಾಜ್ಯ

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಅಧಿಕಾರಿಗಳ ಎತ್ತಂಗಡಿ!

ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯುತ್ತಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು.

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಅಧಿಕಾರಿಗಳ ಎತ್ತಂಗಡಿ!
ಸಂಗ್ರಹ ಚಿತ್ರ
Published On :

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯುತ್ತಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ಹೀಗಾಗಿ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ.

ಬಾಗಲಕೋಟೆಯ ಕುಮಾರೇಶ್ವರ ಕ್ಯಾಂಪಸ್​​ನಲ್ಲಿ ಕರಪತ್ರ ಹಿಡಿದು ಬಂದಿದ್ದ NSUI ಕಾರ್ಯಕರ್ತರು ಹಾಗೂ ಬಿಜೆಪಿಯ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಬಳಿಕ ಐವರು NSUI ಕಾರ್ಯಕರ್ತರನ್ನು ಪೊಲೀಸರು ಠಾಣೆಗೆ ಕರೆ ತಂದು ವಿಚಾರಣೆ ನಡೆಸಲಾಗಿತ್ತು. ಇದೀಗ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆ ಸಿಪಿಐ ವಿಜಯ ಮುರಗುಂಡಿ ಮತ್ತು ನವನಗರ ಪೊಲೀಸ್ ಠಾಣೆ ಪಿಎಸ್​ಐ ಅಶೋಕ ಚೌಹಾಣ್​​ರನ್ನು ವರ್ಗಾವಣೆ ಮಾಡಿ ಡಿಜಿ & ಐಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.

ವಿಜಯಪುರ ಮಹಿಳಾ ಠಾಣೆಗೆ ಸಿಪಿಐ ವಿಜಯ ಮುರಗುಂಡಿ ಅವರನ್ನ ವರ್ಗಾವಣೆ ಮಾಡಲಾಗಿದ್ದರೆ ಬೆಳಗಾವಿ ಉತ್ತರ ವಲಯ ಐಜಿಪಿ ಕಚೇರಿಗೆ ಪಿಎಸ್ ಐ ಅಶೋಕ್​ರನ್ನ ವರ್ಗಾವಣೆ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.