ಹಾವೇರಿ ವಿಶ್ವವಿದ್ಯಾಲಯ: ಗೌರವ ಡಾಕ್ಟರೇಟ್ ಸ್ವೀಕರಿಸಲು ಸಂಸದ ಬಸವರಾಜ ಬೊಮ್ಮಾಯಿ ನಕಾರ!
ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಾವೇರಿ: ಹಾವೇರಿ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಸ್ವೀಕರಿಸಲು ಸಂಸದ ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮೂಲಕ ಅವರು ಸ್ಪಷ್ಪಪಡಿಸಿದ್ದಾರೆ.
ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದಿದ್ದಾರೆ.
ಸಾರ್ವಜನಿಕ ಸೇವೆಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಆದ್ದರಿಂದ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ವಿನಮ್ರವಾಗಿ ಪುನರುಚ್ಚರಿಸುತ್ತೇನೆ ಎಂದು ತಿಳಿಸಿದ್ದಾರೆ.

ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗಾಗಿ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ
ಗೌರವ ಡಾಕ್ಟರೇಟ್ ಎಂಬುದು ದೀರ್ಘಕಾಲದಿಂದ ಯಾವುದಾದರೂ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಬೇಕಾದ ಗೌರವವೆಂಬುದು ನನ್ನ ಅಭಿಪ್ರಾಯ. ಹೀಗಾಗಿ ಇದನ್ನು ಅಂಥ ಸಾಧಕರಿಗೆ ನೀಡಬೇಕು. ರಾಜಕಾರಣಿಗಳಿಗೆ ಅಥವಾ ಸ್ವಯಂ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಗೌರವ ಡಾಕ್ಟರೇಟ್ ನೀಡುವುದು ಸಮಂಜಸವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ವಿಷಯದಲ್ಲಿ ಪುನರ್ ವಿಚಾರ ಮಾಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


