ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳ ಯುವತಿ ನಾಪತ್ತೆ: ಪತ್ತೆಗೆ ನಾಲ್ಕು ಹೆಚ್ಚುವರಿ ತಂಡ ನಿಯೋಜನೆ, ಡ್ರೋನ್ ಶೋಧ- ಈಶ್ವರ ಖಂಡ್ರೆ
ಚಾರಣಕ್ಕಾಗಿ ಕೇರಳದಿಂದ ಆಗಮಿಸಿದ್ದ ಯುವತಿ ಕಕ್ಕಬ್ಬೆ ಗ್ರಾಮದಲ್ಲಿ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದರು. ಕಳೆದ ಗುರುವಾರ ಗೈಡ್ ಹಾಗೂ ಇತರ 15 ಚಾರಣಿಗರೊಂದಿಗೆ ಕೊಡಗಿನ ಎತ್ತರದ ಗಿರಿಶ್ರೇಣಿ ತಡಿಯಂಡವಮೋಳ್ ಬೆಟ್ಟಕ್ಕೆ ತೆರಳಿದ್ದರು.

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ ಚಾರಣಕ್ಕೆ ಬಂದಿದ್ದ ಕೇರಳದ 34 ವರ್ಷದ ಯುವತಿ ಜಿ.ಎಸ್. ಶರಣ್ಯಾ ಪತ್ತೆಗೆ ಹೆಚ್ಚುವರಿ ಸಿಬ್ಬಂದಿಯ ನಾಲ್ಕು ತಂಡಗಳನ್ನು ನಿಯೋಜಿಸಲು ಹಾಗೂ ಡ್ರೋನ್ ಕ್ಯಾಮರಾ ಬಳಸುವಂತೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಯುವತಿ ನಾಪತ್ತೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶೋಧ ಕಾರ್ಯ ತೀವ್ರಗೊಳಿಸುವಂತೆ ಸೂಚನೆ ನೀಡಿದ್ದಾರೆ ಎಂದರು.
ಚಾರಣಕ್ಕಾಗಿ ಕೇರಳದಿಂದ ಆಗಮಿಸಿದ್ದ ಯುವತಿ ಕಕ್ಕಬ್ಬೆ ಗ್ರಾಮದಲ್ಲಿ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದರು. ಕಳೆದ ಗುರುವಾರ ಗೈಡ್ ಹಾಗೂ ಇತರ 15 ಚಾರಣಿಗರೊಂದಿಗೆ ಕೊಡಗಿನ ಎತ್ತರದ ಗಿರಿಶ್ರೇಣಿ ತಡಿಯಂಡವಮೋಳ್ ಬೆಟ್ಟಕ್ಕೆ ತೆರಳಿದ್ದರು.
ಗುರುವಾರ ಕೊನೆಯದಾಗಿ ದೂರವಾಣಿ ಮೂಲಕ ಹೋಂ ಸ್ಟೇ ಸಂಪರ್ಕಿಸಿರುವ ಯುವತಿ, ತಾನು ದಾರಿತಪ್ಪಿದ್ದಾಗಿ ತಿಳಿಸಿದ್ದಾರೆ ಎಂಬ ಮಾಹಿತಿ ಇದೆ.
ವಿಷಯ ತಿಳಿದ ಕೂಡಲೇ ಪೊಲೀಸರು, ನಕ್ಸಲ್ ನಿಗ್ರಹ ದಳ ಹಾಗೂ ಶ್ವಾನದಳ ಹಾಗೂ ಅರಣ್ಯ ಸಿಬ್ಬಂದಿ ಸೇರಿದಂತೆ 50 ಜನರ ಐದು ತಂಡಗಳು ಶೋಧ ಕಾರ್ಯ ನಡೆಸುತ್ತಿವೆ ಎಂದು ಸಚಿವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



