ರಾಜ್ಯ

ಮಡಿಕೇರಿ: ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಯುವತಿ 4 ದಿನಗಳ ಬಳಿಕ ಪತ್ತೆ!

ಕೊಡಗಿನ ತಡೆಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳಂ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ನಾಲ್ಕು ದಿನಗಳ ಬಳಿಕ ಪತ್ತೆಯಾಗಿದ್ದಾರೆ.

ಮಡಿಕೇರಿ: ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಯುವತಿ 4 ದಿನಗಳ ಬಳಿಕ ಪತ್ತೆ!
ನಾಪತ್ತೆಯಾಗಿದ್ದ ಶರಣ್ಯ ಪತ್ತೆ
Published On :

ಮಡಿಕೇರಿ: ಕೊಡಗಿನ ತಡೆಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳಂ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ನಾಲ್ಕು ದಿನಗಳ ಬಳಿಕ ಪತ್ತೆಯಾಗಿದ್ದಾರೆ. ಮಹಿಳೆ ನಾಪತ್ತೆ ವಿಷಯ ಅರಣ್ಯ ಇಲಾಖೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಹೀಗಾಗಿ ಹಗಲಿರುಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಸ್ಥಳೀಯರೊಂದಿಗೆ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಸತತ ಹುಡುಕಾಟ ನಡೆಸಿದ್ದು ಇಂದು ಪತ್ತೆಯಾಗಿದ್ದಾರೆ.

ಶರಣ್ಯ ಗುರುವಾರ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ಹೋಗಿದ್ದು ರಸ್ತೆ ಸಿಗದೇ ಪಾಳು ಬಿದ್ದ ಬಂಗಲೆಯೊದರಲ್ಲಿ ಉಳಿದುಕೊಂಡಿದ್ದರು. ಇನ್ನು ಶೋಧ ಕಾರ್ಯಾಚರಣೆ ಕೈಗೊಂಡಿದ್ದ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್, ಶ್ವಾನ ದಳವನ್ನು ಬಳಸಿದ್ದರೂ ಪತ್ತೆಯಾಗದ ಕಾರಣ ಆತಂಕ ಮೂಡಿತ್ತು. ಇದೀಗ ಶರಣ್ಯ ಪತ್ತೆಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.