ರಾಜ್ಯ

ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು!

ಮಹಿಳೆ ವಿರುದ್ಧ ಪ್ರತಿದೂರು ದಾಖಲಿಸಿರುವ ಸ್ವಾಮೀಜಿ, ತಮ್ಮ ತೇಜೋವಧೆ ಮಾಡಲು 3 ಕೋಟಿ ರೂಪಾಯಿಗಾಗಿ ಮಹಿಳೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು!
ಜಯಮೃತ್ಯುಂಜಯ ಸ್ವಾಮೀಜಿ
Published On :

ಬೆಂಗಳೂರು: ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಈ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಹೋರಾಟದ ನೇತೃತ್ವವಹಿಸಿಕೊಂಡಿದ್ದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆ ದೂರು ನೀಡಿದ್ದು, ಸ್ವತಃ ಸ್ವಾಮೀಜಿ ನನ್ನ ಖಾಸಗಿ ವಿಡಿಯೋ ಮಾಡಿ ಲೈಂಗಿಕವಾಗಿ ಸಹಕರಿಸುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತೀಚಿಗೆ ಜಯಮೃತ್ಯುಂಜಯ ಸ್ವಾಮೀಜಿಯದ್ದು ಎನ್ನಲಾದ ಖಾಸಗಿ ವಿಡಿಯೋ ಹರಿದಾಡಿದ್ದು, ಈಗ ಮಹಿಳೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಸ್ವಾಮೀಜಿಯಿಂದ ಪ್ರತಿದೂರು

ಇನ್ನೊಂದೆಡೆ, ಜಯಮೃತ್ಯುಂಜಯ ಸ್ವಾಮೀಜಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ವಿರುದ್ಧ ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಸ್ವಾಮೀಜಿ ತಮ್ಮ ದೂರಿನಲ್ಲಿ, ಸಂತ್ರಸ್ತೆ ಮಹಿಳೆ ತಾನು ಅನಾಥಾಶ್ರಮ ನಡೆಸುತ್ತಿರುವುದಾಗಿ ಹೇಳಿ ಪರಿಚಯ ಮಾಡಿಕೊಂಡಿದ್ದಳು ಎಂದು ತಿಳಿಸಿದ್ದಾರೆ. ಅಲ್ಲದೆ ತಮ್ಮ ತೇಜೋವಧೆ ಮಾಡಲು 3 ಕೋಟಿ ರೂಪಾಯಿಗಾಗಿ ಮಹಿಳೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.