ರಾಜ್ಯ

ಜಯಮೃತ್ಯುಂಜಯ ಶ್ರೀ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಅವರು ಸ್ವಾಮೀಜಿಗಳಾಗಿ ಉಳಿದಿಲ್ಲ; ಕಾಶಪ್ಪನವರ್ ಕಿಡಿ

ಬಸವ ಜಯಮೃತ್ಯುಂಜಯ ಶ್ರೀ ಈಗ ಸ್ವಾಮೀಜಿಗಳಾಗಿ ಉಳಿದಿಲ್ಲ. ನಡೆ-ನುಡಿಗಳಲ್ಲಿ ಅವರು ಸ್ವಾಮೀಜಿಗಳಾಗಿಲ್ಲ ಇಂಥಹ ಕಾರಣಕ್ಕೆ ಅವರನ್ನು ಪೀಠದಿಂದ ಉಚ್ಛಾಟನೆ ಮಾಡಲಾಗಿತ್ತು ಎಂದು ಕಾಶಪ್ಪನವರ್ ಹೇಳಿದ್ದಾರೆ.

ಜಯಮೃತ್ಯುಂಜಯ ಶ್ರೀ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಅವರು ಸ್ವಾಮೀಜಿಗಳಾಗಿ ಉಳಿದಿಲ್ಲ; ಕಾಶಪ್ಪನವರ್ ಕಿಡಿ
ವಿಜಯಾನಂದ್ ಕಾಶೆಪ್ಪನವರ್
Published On :

ಬಾಗಲಕೋಟೆ: ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಈ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಹೋರಾಟದ ನೇತೃತ್ವವಹಿಸಿಕೊಂಡಿದ್ದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆ ದೂರು ನೀಡಿದ್ದು, ಸ್ವತಃ ಸ್ವಾಮೀಜಿ ನನ್ನ ಖಾಸಗಿ ವಿಡಿಯೋ ಮಾಡಿ ಲೈಂಗಿಕವಾಗಿ ಸಹಕರಿಸುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್, ಬೆಂಕಿಯಿಲ್ಲದೇ ಹೊಗೆಯಾಡುವುದಿಲ್ಲ. ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ದರೇ ಯಾಕೆ ಸ್ಟೇ ತರುತ್ತಿದ್ದರು ಎಂದು ಕಿಡಿ ಕಾರಿದ್ದಾರೆ.

ಬಸವ ಜಯಮೃತ್ಯುಂಜಯ ಶ್ರೀ ಈಗ ಸ್ವಾಮೀಜಿಗಳಾಗಿ ಉಳಿದಿಲ್ಲ. ನಡೆ-ನುಡಿಗಳಲ್ಲಿ ಅವರು ಸ್ವಾಮೀಜಿಗಳಾಗಿಲ್ಲ ಇಂಥಹ ಕಾರಣಕ್ಕೆ ಅವರನ್ನು ಪೀಠದಿಂದ ಉಚ್ಛಾಟನೆ ಮಾಡಲಾಗಿತ್ತು ಎಂದು ಕಾಶಪ್ಪನವರ್ ಹೇಳಿದ್ದಾರೆ.

ಬದಲಾಗಲಿ ಎಂದು ಸ್ವಾಮೀಜಿಗಳಿಗೆ ನೋಟಿಸ್ ಕೂಡ ನೀಡಿದ್ದೆವು. ಆದರೆ ನೋಟಿಸ್ ನೀಡಿದರೂ ಬದಲಾಗದ ಹಿನ್ನೆಲೆಯಲ್ಲಿ ಅವರನ್ನು ಉಚ್ಛಾಟನೆ ಮಾಡಲಾಯಿತು. ಕಾಲ ಎಲ್ಲದಕ್ಕೂ ಉತ್ತರ ನೀಡುತ್ತಿದೆ ಎಂದು ಕಾಶಪ್ಪನವರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.