ರಾಜ್ಯ

ತಡಿಯಂಡಮೋಳ್ ಪ್ರಕರಣಕ್ಕೆ ಹೊಸ ತಿರುವು: ಶರಣ್ಯಗೆ ನಕ್ಸಲ್ ಲಿಂಕ್..? ತನಿಖೆಗೆ BJP ಪಟ್ಟು

ನೂರಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ನಡೆಸಿದ ವ್ಯಾಪಕ ಶೋಧ ಕಾರ್ಯಾಚರಣೆಯ ನಡುವೆಯೂ ಮೂರು ದಿನಗಳ ಕಾಲ ಪತ್ತೆಯಾಗದ ಶರಣ್ಯ, ನಾಲ್ಕನೇ ದಿನ ಅರಣ್ಯದಲ್ಲಿ ಪತ್ತೆಯಾಗಿರುವುದು ಅನುಮಾನಗಳನ್ನು ಹುಟ್ಟುಹಾಕಿದೆ.

ತಡಿಯಂಡಮೋಳ್ ಪ್ರಕರಣಕ್ಕೆ ಹೊಸ ತಿರುವು: ಶರಣ್ಯಗೆ ನಕ್ಸಲ್ ಲಿಂಕ್..? ತನಿಖೆಗೆ BJP ಪಟ್ಟು
ಕೊನೆಗೂ ಪತ್ತೆಯಾದ ಶರಣ್ಯ
Published On :

ಮಡಿಕೇರಿ: ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಕೇರಳ ಮೂಲದ ಶರಣ್ಯ ನಾಪತ್ತೆ ಪ್ರಕರಣ ಈಗ ರಾಜಕೀಯ ಆಯಾಮ ಪಡೆದುಕೊಂಡಿದೆ.

ಶರಣ್ಯ ಪತ್ತೆಯಾದ ರೀತಿ ಮತ್ತು ಆಕೆಯ ನಡವಳಿಕೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಇದರ ಹಿಂದೆ 'ಕಾಣದ ಕೈಗಳ' ಕೈವಾಡವಿದೆ ಎಂದು ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಪ್ರಮುಖರು ಗಂಭೀರ ಆರೋಪ ಮಾಡಿದ್ದಾರೆ.

ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ ಬಿಜೆಪಿ ನಾಯಕರು ನಾಪೋಕ್ಲು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಜಿಲ್ಲಾ ಬಿಜೆಪಿ ಗ್ರಾಮೀಣ ಮಂಡಲದ ಪ್ರಧಾನ ಕಾರ್ಯದರ್ಶಿ ಪಿ.ದಾನೋಜ್ ನೇತೃತ್ವದಲ್ಲಿ ಕಾರ್ಯಕರ್ತರು ಮಂಗಳವಾರ ನಾಪೋಕ್ಲು ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ.

ಏಪ್ರಿಲ್ 2ರಂದು ಕಾಣೆಯಾಗಿದ್ದ ಕೇರಳ ಮೂಲದ 36 ವರ್ಷದ ಟ್ರೆಕ್ಕರ್ ಶರಣ್ಯ ಅವರನ್ನು ನಾಲ್ಕು ದಿನಗಳ ಬಳಿಕ ಪತ್ತೆಹಚ್ಚಲಾಗಿತ್ತು. ನೂರಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ನಡೆಸಿದ ವ್ಯಾಪಕ ಶೋಧ ಕಾರ್ಯಾಚರಣೆಯ ನಡುವೆಯೂ ಮೂರು ದಿನಗಳ ಕಾಲ ಪತ್ತೆಯಾಗದ ಶರಣ್ಯ, ನಾಲ್ಕನೇ ದಿನ ಅರಣ್ಯದಲ್ಲಿ ಪತ್ತೆಯಾಗಿರುವುದು ಅನುಮಾನಗಳನ್ನು ಹುಟ್ಟುಹಾಕಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಶರಣ್ಯ ಅವರ ವರ್ತನೆ ಬಗ್ಗೆಯೂ ಶಂಕೆಗಳು ವ್ಯಕ್ತವಾಗುದ್ದು, ಈ ಬಗ್ಗೆ, ಸಂಪೂರ್ಣ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಒಂದು ವೇಳೆ ಇದು ನಾಟಕವಾಗಿದ್ದರೆ, ಸರ್ಕಾರದ ಹಣ ವ್ಯರ್ಥ ಮಾಡಿದ ಕಾರಣಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು. ಇಷ್ಟು ದಟ್ಟ ಅರಣ್ಯದಲ್ಲಿ ಆಹಾರವಿಲ್ಲದೆ ನಾಲ್ಕು ದಿನ ಉಳಿಯಲು ಸಾಧ್ಯವಿಲ್ಲ. ಕೆಲವು ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆಗಳೂ ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಈ ಪ್ರಕರಣ ಇನ್ನಷ್ಟು ಅನುಮಾನ ಹುಟ್ಟಿಸಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ ಅಂಬಿ ಕಾರ್ಯಪ್ಪ ಅವರು ಮಾತನಾಡಿ, ಈ ಘಟನೆ ಪಬ್ಲಿಸಿಟಿ ಸ್ಟಂಟ್ ಆಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿ, ಇದರಿಂದ ಕೊಡಗು ಪ್ರವಾಸೋದ್ಯಮಕ್ಕೆ ಕೆಟ್ಟ ಹೆಸರು ಬಂದಿದೆ ಎಂದು ಹೇಳಿದ್ದಾರೆ.

ಎಸ್ಪಿ ಬಿಂದು ಮಣಿ ಅವರು ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಯಾವುದೇ ಅನುಮಾನಗಳು ವ್ಯಕ್ತವಾಗದ ಕಾರಣ ಯಾವುದೇ ಎಫ್ಐಆರ್ ದಾಖಲಿಸಲಾಗಿಲ್ಲ ಎಂದು ದೃಢಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.