ಸರ್ಕಾರಿ ಕಚೇರಿಗಳಲ್ಲಿ 'ಲಂಚ ಕೊಡಬೇಡಿ' ಫಲಕ ಅಳವಡಿಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
ಈ ಕುರಿತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸೂಚನೆ ನೀಡಿದ್ದು, ಸೂಚನೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚದ ಸಮಸ್ಯೆಯನ್ನು ತಡೆಯಲು ಹಾಗೂ ಪಾರದರ್ಶಕತೆ ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರ ನಡೆಯಲು ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಸರ್ಕಾರದ ಎಲ್ಲಾ ಕಚೇರಿಗಳಲ್ಲೂ ‘ಲಂಚ ಕೊಡಬೇಡಿ’ ಎಂಬ ಫಲಕಗಳನ್ನು ಅಳವಡಿಸುವಂತೆ ಸೂಚನೆ ನೀಡಿದೆ.
ಈ ಕುರಿತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸೂಚನೆ ನೀಡಿದ್ದು, ಸೂಚನೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚದ ಸಮಸ್ಯೆಯನ್ನು ತಡೆಯಲು ಹಾಗೂ ಪಾರದರ್ಶಕತೆ ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಲಂಚ ಕೊಡಬೇಡಿ ಫಲಕ ಅಳವಡಿಕೆ ಕಡ್ಡಾಯವಾಗಿದ್ದು, ಫಲಕದಲ್ಲಿ ಯಾವುದೇ ಸರ್ಕಾರಿ ನೌಕರ ಲಂಚ ಕೇಳಿದರೆ ಏನು ಮಾಡಬೇಕು ಎಂಬ ಮಾಹಿತಿ, ಲೋಕಾಯುಕ್ತದ ಸಹಾಯವಾಣಿ ಸಂಖ್ಯೆಯನ್ನು ಪ್ರದರ್ಶಿಸಬೇಕೆಂದು ಸೂಚನೆ ನೀಡಿದ್ದಾರೆ.
ಫಲಕದಲ್ಲಿ “ಲಂಚ ಕೊಡಬೇಡಿ. ಈ ಕಚೇರಿಯ ಯಾರಾದರೂ ಲಂಚ ಕೇಳಿದರೆ ಅಥವಾ ಭ್ರಷ್ಟಾಚಾರ ಕುರಿತು ಮಾಹಿತಿ ಇದ್ದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಬಹುದು” ಎಂಬ ಸಂದೇಶ ಇರಬೇಕು ಎಂದು ಸೂಚಿಸಲಾಗಿದೆ.
ಕರ್ನಾಟಕ ಆಡಳಿತ ಸುಧಾರಣಾ ಸಮಿತಿ-2 ಶಿಫಾರಸುಗಳಂತೆ, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಲಂಚ ವಿರೋಧಿ ಸಂದೇಶಗಳನ್ನು ಹಾಕುವ ಮೂಲಕ ಕಚೇರಿಗಳಲ್ಲಿ ಪಾರದರ್ಶಕತೆ ತರಲು ಸರ್ಕಾರ ಮುಂದಾಗಿದೆ.
ಇದೇ ವೇಳೆ, ಎಲ್ಲಾ ಇಲಾಖೆ ಮುಖ್ಯಸ್ಥರು, ಕಾರ್ಯದರ್ಶಿಗಳು ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ತಮ್ಮ ಕಚೇರಿಗಳಲ್ಲಿ ಲೋಕಾಯುಕ್ತ ಮುಖ್ಯ ಕಚೇರಿ ಹಾಗೂ ಜಿಲ್ಲಾ ಕಚೇರಿಗಳ ದೂರವಾಣಿ ಸಂಖ್ಯೆ, ವಿಳಾಸ, ಇಮೇಲ್ ಸೇರಿದಂತೆ ಸಂಪೂರ್ಣ ವಿವರಗಳನ್ನು ಒಳಗೊಂಡ ಮತ್ತೊಂದು ಫಲಕವನ್ನು ಅಳವಡಿಸಬೇಕು ಎಂದು ಸೂಚಿಸಲಾಗಿದೆ.
ಈ ನಿಯಮವು ಎಲ್ಲಾ ಸರ್ಕಾರಿ ಕಚೇರಿಗಳು, ಮಂಡಳಿಗಳು, ನಿಗಮಗಳು ಮತ್ತು ಅನುದಾನಿತ ಸಂಸ್ಥೆಗಳಿಗೆ ಅನ್ವಯಿಸುತ್ತದೆ ಎಂದು ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



