ರಾಜ್ಯ

Zombie Drug: ದಾರಿತಪ್ಪಿಸುವ ವಿಡಿಯೋ ಶೇರ್ ಮಾಡಿದ್ದ ವ್ಯಕ್ತಿಯ ಬಂಧನ; ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಬಂಧಿತ ಆರೋಪಿಯನ್ನು ವಿದ್ಯಾರಣ್ಯಪುರದ ನಿವಾಸಿ ಹೇಮಂತ್ ಎಂದು ಗುರುತಿಸಲಾಗಿದೆ.

Zombie Drug: ದಾರಿತಪ್ಪಿಸುವ ವಿಡಿಯೋ ಶೇರ್ ಮಾಡಿದ್ದ ವ್ಯಕ್ತಿಯ ಬಂಧನ; ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ
ಆರೋಪಿ ಹೇಮಂತ್ - ವಿಡಿಯೋದಲ್ಲಿರುವ ವ್ಯಕ್ತಿ
Published On :

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ‘ಝಾಂಬಿ ಡ್ರಗ್’ ಹಾವಳಿ ಶುರುವಾಗಿದ್ದು, ವ್ಯಕ್ತಿಯೊಬ್ಬ ಝಾಂಬಿ ಡ್ರಗ್ಸ್ ಸೇವಿಸಿದ್ದಾನೆ ಎಂಬ ತಪ್ಪು ಮಾಹಿತಿಯುಳ್ಳ ವಿಡಿಯೋವನ್ನು ಅಪ್‌ಲೋಡ್ ಮಾಡಿದ ಖಾಸಗಿ ಕಂಪನಿಯೊಂದರ 29 ವರ್ಷದ ಉದ್ಯೋಗಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ವಿದ್ಯಾರಣ್ಯಪುರದ ನಿವಾಸಿ ಹೇಮಂತ್ ಎಂದು ಗುರುತಿಸಲಾಗಿದೆ. ಪೊಲೀಸರು ತನ್ನನ್ನು ಹುಡುಕುತ್ತಿದ್ದಾರೆ ಎಂಬ ಮಾಹಿತಿ ತಿಳಿದ ನಂತರ ಆರೋಪಿ ಹೇಮಂತ್ ಸಾಮಾಜಿಕ ಮಾಧ್ಯಮದಲ್ಲಿ ಕ್ಷಮೆಯಾಚಿಸಿದ್ದರು.

ಆದಾಗ್ಯೂ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಆರೋಪಿ ನೋಟಿಸ್ ನೀಡಿದ್ದು, ನಂತರ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೇಮಂತ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 353(2), ಸೆಕ್ಷನ್ 352ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರವಾಗಿ ವರ್ತಿಸುತ್ತಿದ್ದ ಯುವಕನ ವಿಡಿಯೊವೊಂದು ‘ಝಾಂಬಿ ಡ್ರಗ್’ ಪ್ರಭಾವ ಎಂದು ಬಿಂಬಿತವಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ನಗರ ಪೊಲೀಸ್ ಆಯುಕ್ತರು, ವಿಡಿಯೊದಲ್ಲಿದ್ದ ಯುವಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆತ ಯಾವುದೇ ಮಾದಕ ದ್ರವ್ಯ ಸೇವಿಸಿಲ್ಲ ಎಂಬುದು ದೃಢಪಟ್ಟಿದೆ. ಆತನಿಗೆ ಆರ್ಥ್ರೈಟಿಸ್ ಇದ್ದು, ಆಲ್ಕೋಹಾಲ್‌ ಜತೆಗೆ ಪೇನ್‌ಕಿಲ್ಲರ್ ಮಾತ್ರೆ ಸೇವಿಸಿದ್ದರಿಂದ ನಶೆಯಿಂದ ಸಮತೋಲನ ತಪ್ಪಿದ್ದಾನೆ. ಆದರೆ, ಕೇವಲ ಊಹೆಗಳ ಮೇಲೆ ಒಬ್ಬ ವ್ಯಕ್ತಿಯ ಬಗ್ಗೆ ಅಪಪ್ರಚಾರ ಮಾಡುವುದು ಅಪರಾಧ ಎಂದು ತಿಳಿಸಿದ್ದಾರೆ.

ಇಂತಹ ತಪ್ಪು ಮಾಹಿತಿ ಅಥವಾ ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.