ಚಿಕ್ಕಮಗಳೂರು: ಚಂದ್ರದ್ರೋಣ ಬೆಟ್ಟದ ತಪ್ಪಲಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶವವಾಗಿ ಪತ್ತೆ
ಮೊನ್ನೆ ಮಂಗಳವಾರ ಸಂಜೆ ಮಾಣಿಕ್ಯಾಧಾರ ಜಲಪಾತ ವೀಕ್ಷಿಸಲು ಹೋಗುವಾಗ ಬಾಲಕಿ ಕಣ್ಮರೆಯಾಗಿದ್ದಳು.

ಚಿಕ್ಕಮಗಳೂರು: ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ (15ವ) ಶವ ಪತ್ತೆಯಾಗಿದೆ.ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಬಾಲಕಿ ನಾಪತ್ತೆಯಾಗಿದ್ದಳು. 2000 ಅಡಿ ಆಳ ಮಾಣಿಕ್ಯಧಾರಾದಲ್ಲಿ ಶ್ರೀನಂದಾ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೇರಳದ ಪಾಲಕ್ಕಾಡ್ ಮೂಲದ ಅಪ್ರಾಪ್ತ ಬಾಲಕಿ ಶ್ರೀನಂದಾ ನಾಪತ್ತೆಯಾಗಿ ಮೂರು ದಿನವಾಗಿತ್ತು.
ಮೊನ್ನೆ ಮಂಗಳವಾರ ಸಂಜೆ ಮಾಣಿಕ್ಯಾಧಾರ ಜಲಪಾತ ವೀಕ್ಷಿಸಲು ಹೋಗುವಾಗ ಬಾಲಕಿ ಕಣ್ಮರೆಯಾಗಿದ್ದಳು.
41 ಕುಟುಂಬದ ಸದಸ್ಯರೊಂದಿಗೆ ಹಂಪಿ ಪ್ರವಾಸ ಮುಗಿಸಿ ಇಲ್ಲಿಗೆ ಬಂದಿದ್ದ ಶ್ರೀನಂದಾ, ನಾಪತ್ತೆಯಾಗುವ ಕೇವಲ ಐದು ನಿಮಿಷಗಳ ಮೊದಲು ತಂದೆಯ ಮೊಬೈಲ್‍ನಲ್ಲಿ ಅತ್ಯಂತ ಖುಷಿಯಿಂದ ರೀಲ್ಸ್ ಮಾಡಿದ್ದಳು. ಜನದಟ್ಟಣೆಯ ನಡುವೆ ಮೆಟ್ಟಿಲುಗಳನ್ನು ಇಳಿದು ಬರುವಾಗ ಅವಳು ಹಠಾತ್ತನೆ ಕಾಣೆಯಾಗಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು. ಇದೀಗ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.
ಬಾಲಕಿ ನಾಪತ್ತೆಯಾದ ವಿಚಾರ ಗೊತ್ತಾಗುತ್ತಿದ್ದಂತೆ ರಕ್ಷಣಾ ತಂಡಗಳು ಥರ್ಮಲ್ ಡ್ರೋನ್ ಮೂಲಕ ಬಾಲಕಿ ಪತ್ತೆಗೆ ಹುಡುಕಾಟ ನಡೆಸಿದ್ದರು. ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸುಮಾರು 60ಕ್ಕೂ ಹೆಚ್ಚು ಸಿಬ್ಬಂದಿ 5 ತಂಡಗಳನ್ನಾಗಿ ಮಾಡಿಕೊಂಡು ಶೋಧಕಾರ್ಯಕ್ಕೆ ಇಳಿದಿತ್ತು.
ಬಾಲಕಿ ಮಿಸ್ ಆದ ಜಾಗ ತೀವ್ರ ಕಡಿದಾದ ಪ್ರದೇಶವಾಗಿದ್ದು ಅಲ್ಲಿಂದ ಯಾವ-ಯಾವ ಮಾರ್ಗದಲ್ಲಿ ಹೋಗಲು ಸಾಧ್ಯವಿರುತ್ತೋ ಆ ಮಾರ್ಗದಲ್ಲೆಲ್ಲಾ ತಂಡ ಹುಡುಕಾಡಿತ್ತು. ANF, SDRF, ಪೊಲೀಸ್, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಶೋಧ ಕಾರ್ಯ ನಡೆಸಿತು. ದುರಂತ ಎನ್ನುವಂತೆ ಇಂದು ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



