ರಾಜ್ಯ

ಚಾರಣಿಗರ ಸುರಕ್ಷತೆಗೆ ಆ್ಯಪ್ ಜೊತೆಗೆ SOP ರೂಪಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಚಾರಣಿಗರಿಗೆ ಮಾರ್ಗದರ್ಶನ ಮಾಡುವ ನೇಚರ್ ಗೈಡ್‍ಗಳಿಗೆ ಕಡ್ಡಾಯವಾಗಿ ವೈರ್‍ಲೆಸ್ ಸೆಟ್ ನೀಡಬೇಕು. ಟ್ರೆಕ್ಕರ್‌ಗಳ ಸುರಕ್ಷತೆಯಲ್ಲಿ ಗೈಡ್‌ಗಳು, ಟ್ರೆಕ್ಕರ್‌ಗಳು ಮತ್ತು ಅರಣ್ಯ ಇಲಾಖೆ ಎಲ್ಲರೂ ಜವಾಬ್ದಾರರಾಗಿರಬೇಕು. ಯಾವುದೇ ಅನಾಹುತ ಸಂಭವಿಸಿದರೆ ಗೈಡ್‌ಗಳನ್ನೂ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು.

ಚಾರಣಿಗರ ಸುರಕ್ಷತೆಗೆ ಆ್ಯಪ್ ಜೊತೆಗೆ SOP ರೂಪಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ
ಸಚಿವ ಈಶ್ವರ್‌ ಖಂಡ್ರೆ
Published On :

ಬೆಂಗಳೂರು: ಟ್ರೆಕ್ಕಿಂಗ್‌ಗೆ ತೆರಳುವವರ ಸುರಕ್ಷತೆಗಾಗಿ ತಂತ್ರಜ್ಞಾನ ಆಧಾರಿತ ಕ್ರಮಗಳನ್ನು ಜಾರಿಗೆ ತರಬೇಕೆಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆಯವರು ಗುರುವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತಡಿಯಾಂಡಮೋಲ್ ಚಾರಣದ ವೇಳೆ ಕೇರಳದ ಶರಣ್ಯ ಎಂಬ ಮಹಿಳೆ 3 ದಿನ ಕಾಡಿನಲ್ಲಿ ದಿನ ಕಳೆದಿರುವುದು ಹಾಗೂ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತದ ಬಳಿ ಬಾಲಕಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಖಂಡ್ರೆ ಈ ಲಿಖಿತ ಸೂಚನೆ ಕೊಟ್ಟಿದ್ದಾರೆ.

ಅರಣ್ಯ ಇಲಾಖೆ ಈಗಾಗಲೇ ಅಭಿವೃದ್ಧಿಪಡಿಸಿರುವ ಇ-ಗಸ್ತು, ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಬಳಕೆ ಮಾಡುವ ಆ್ಯಪ್ ಮಾದರಿಯಲ್ಲಿಯೇ ಚಾರಣ ಅವಧಿಯಲ್ಲಿ ತಾತ್ಕಾಲಿಕವಾಗಿ ಚಾರಣಿಗರ ಮೊಬೈಲ್‍ನಲ್ಲಿ ಆ್ಯಪ್ ಅಳವಡಿಸಿದರೆ, ಯಾರೇ ದಾರಿ ತಪ್ಪಿಸಿಕೊಂಡರೂ ಅವರ ಶೋಧಕಾರ್ಯ ಸುಲಭವಾಗುತ್ತದೆ. ಹೀಗಾಗಿ ಆ್ಯಪ್ ಅಭಿವೃದ್ಧಿಗೆ ಕ್ರಮ ವಹಿಸುವಂತೆ ಮತ್ತು ಚಾರಣಿಗರಿಗೆ ಗುಂಪು ವಿಮೆ ಮಾಡಿಸುವಂತೆ ಸಚಿವರು ನಿರ್ದೇಶಿಸಿದ್ದಾರೆ.

ಇದರೊಂದಿಗೆ ಚಾರಣಿಗರಿಗೆ ಮಾರ್ಗದರ್ಶನ ಮಾಡುವ ನೇಚರ್ ಗೈಡ್‍ಗಳಿಗೆ ಕಡ್ಡಾಯವಾಗಿ ವೈರ್‍ಲೆಸ್ ಸೆಟ್ ನೀಡಬೇಕು. ಟ್ರೆಕ್ಕರ್‌ಗಳ ಸುರಕ್ಷತೆಯಲ್ಲಿ ಗೈಡ್‌ಗಳು, ಟ್ರೆಕ್ಕರ್‌ಗಳು ಮತ್ತು ಅರಣ್ಯ ಇಲಾಖೆ ಎಲ್ಲರೂ ಜವಾಬ್ದಾರರಾಗಿರಬೇಕು. ಯಾವುದೇ ಅನಾಹುತ ಸಂಭವಿಸಿದರೆ ಗೈಡ್‌ಗಳನ್ನೂ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು ಎಂದೂ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.