ರಾಜ್ಯ

ಕಲಬುರಗಿ: IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ; ಡ್ಯಾಂಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಕಾಳಗಿ ತಾಲೂಕಿನ ರುಮ್ಮನಗೂಡ್ ನಿವಾಸಿ ಚಂದ್ರಕಾಂತ ದೇಸಾಯಿ(40) ಎಂದು ಗುರುತಿಸಲಾಗಿದೆ.

ಕಲಬುರಗಿ: IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ; ಡ್ಯಾಂಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಚಂದ್ರಕಾಂತ ದೇಸಾಯಿ
Published On :

ಕಲಬುರಗಿ: ರಾಜ್ಯದಲ್ಲಿ ಐಪಿಎಲ್ ಬೆಟ್ಟಿಂಗ್ ಹೆಚ್ಚುತ್ತಿದ್ದು, ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟವಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾಗೂರ ಬಳಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಕಾಳಗಿ ತಾಲೂಕಿನ ರುಮ್ಮನಗೂಡ್ ನಿವಾಸಿ ಚಂದ್ರಕಾಂತ ದೇಸಾಯಿ(40) ಎಂದು ಗುರುತಿಸಲಾಗಿದೆ.

ಚಂದ್ರಕಾಂತ ದೇಸಾಯಿ ಅವರು ಐಪಿಎಲ್ ಬೆಟ್ಟಿಂಗ್ ಆಡಿ ಸಿಕ್ಕಾಪಟ್ಟೆ ಹಣ ಕಳೆದುಕೊಂಡಿದ್ದರು ಮತ್ತು ಸಾಲ ಮಾಡಿ, ಸಾಲಗಾರರ ಕಿರುಕುಳಕ್ಕೆ ಬೇಸತ್ತು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಬೆಟ್ಟಿಂಗ್ ಚಟಕ್ಕೆ ಬಿದ್ದಿದ್ದ ಚಂದ್ರಕಾಂತ ತನ್ನ ಬಳಿಯಿದ್ದ ಹಣವನ್ನೆಲ್ಲಾ ಕಳೆದುಕೊಂಡಿದ್ದಲ್ಲದೆ, ಜೂಜಿಗಾಗಿ ಹಲವರಿಂದ ದೊಡ್ಡ ಮೊತ್ತದ ಸಾಲವನ್ನೂ ಮಾಡಿದ್ದರು. ಬೆಟ್ಟಿಂಗ್‌ನಲ್ಲಿ ಹಣ ಕೈಕೊಟ್ಟಿದ್ದರಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇತ್ತ ಸಾಲಗಾರರು ಹಣ ವಾಪಸ್ ನೀಡುವಂತೆ ಒತ್ತಡ ಹೇರುತ್ತಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಾಗೂರ ಸೇತುವೆ ಬಳಿ ತಲುಪಿದ ಚಂದ್ರಕಾಂತ ಅವರು, ತಮ್ಮ ಬೈಕ್ ಮತ್ತು ಮೊಬೈಲ್ ಫೋನ್ ಅನ್ನು ಸೇತುವೆ ಮೇಲೆಯೇ ಬಿಟ್ಟು, ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದಿದ್ದಾರೆ. ಸ್ಥಳದಲ್ಲಿ ಬೈಕ್ ಮತ್ತು ಮೊಬೈಲ್ ಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.