ರಾಜ್ಯ

ಕೊನೆ ಹಂತದ ಲೋಡ್ ಟೆಸ್ಟಿಂಗ್: 5 ದಿನಗಳ ಕಾಲ ಪೀಣ್ಯ ಫ್ಲೈ ಓವರ್ ಬಂದ್; ಪ್ರಯಾಣಿಕರಿಗೆ ಪರ್ಯಾಯ ಮಾರ್ಗ

ಏಪ್ರಿಲ್ 13ರ ಬೆಳಗ್ಗೆ 5 ಗಂಟೆಯಿಂದ ಆರಂಭಗೊಂಡು, ಏಪ್ರಿಲ್ 17ರ ಬೆಳಗ್ಗೆ 11 ಗಂಟೆಯವರೆಗೆ ಫ್ಲೈಓವರ್ ಮೇಲೆ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ.

ಕೊನೆ ಹಂತದ ಲೋಡ್ ಟೆಸ್ಟಿಂಗ್: 5 ದಿನಗಳ ಕಾಲ ಪೀಣ್ಯ ಫ್ಲೈ ಓವರ್ ಬಂದ್; ಪ್ರಯಾಣಿಕರಿಗೆ ಪರ್ಯಾಯ ಮಾರ್ಗ
ಪೀಣ್ಯ ಫ್ಲೈಓವರ್
Published On :

ಬೆಂಗಳೂರು: ತುಮಕೂರು ರಸ್ತೆಯ ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನ (Peenya Elevated Flyover) ಕೇಬಲ್ ದುರಸ್ತಿ ಕಾರ್ಯ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಈಗ ಅಂತಿಮ ಹಂತದ ಲೋಡ್ ಟೆಸ್ಟಿಂಗ್ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೇಲ್ಸೇತುವೆಯನ್ನು ಏಪ್ರಿಲ್ 13ರಿಂದ ಐದು ದಿನಗಳ ಕಾಲ ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಪೀಣ್ಯ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಪೀಣ್ಯ ಫ್ಲೈಓವರ್‌ ಬಂದ್ ಆಗುವ ಅವಧಿ

ಏಪ್ರಿಲ್ 13ರ ಬೆಳಗ್ಗೆ 5 ಗಂಟೆಯಿಂದ ಆರಂಭಗೊಂಡು, ಏಪ್ರಿಲ್ 17ರ ಬೆಳಗ್ಗೆ 11 ಗಂಟೆಯವರೆಗೆ ಫ್ಲೈಓವರ್ ಮೇಲೆ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ.

ಪೀಣ್ಯ ಫ್ಲೈಓವರ್‌ ಬಂದ್: ಪರ್ಯಾಯ ಮಾರ್ಗಗಳು

ವಾಹನ ಸವಾರರಿಗೆ ತೊಂದರೆಯಾಗದಂತೆ ಪೊಲೀಸರು ಬದಲಿ ಮಾರ್ಗಗಳನ್ನು ಸೂಚಿಸಿದ್ದಾರೆ. ಅವುಗಳು ಹೀಗಿವೆ; ನೆಲಮಂಗಲದಿಂದ ಬೆಂಗಳೂರು ಕಡೆಗೆ ಬರುವ ವಾಹನಗಳು ಕೆನ್ನಮೆಟಲ್ ವಿಡಿಯಾ ಹತ್ತಿರ ಫ್ಲೈಓವರ್ ಕೆಳಭಾಗದ ಎನ್‌ಹೆಚ್-4 ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್‌ಆರ್‌ಎಸ್ (SRS) ಜಂಕ್ಷನ್ ಮತ್ತು ಗೊರಗುಂಟೆಪಾಳ್ಯ ಮೂಲಕ ಸಂಚರಿಸಬಹುದಾಗಿದೆ.

ಸಿಎಂಟಿಐನಿಂದ ನೆಲಮಂಗಲ ಕಡೆಗೆ ಹೋಗುವ ವಾಹನಗಳು ಫ್ಲೈಓವರ್ ಕೆಳಭಾಗದ ಎನ್‌ಹೆಚ್‌-4 ಮತ್ತು ಸರ್ವಿಸ್ ರಸ್ತೆ ಮೂಲಕ ಎಸ್‌ಆರ್‌ಎಸ್ ಜಂಕ್ಷನ್, ಪೀಣ್ಯ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ, 8ನೇ ಮೈಲಿ ಮತ್ತು ಪಾರ್ಲೆ ಜಿ ಟೋಲ್ ಮೂಲಕ ಸಾಗಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.