ರಾಜ್ಯ

ದೆಹಲಿಗೆ 'ಕೈ' ಶಾಸಕರು ದೌಡು: ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು- ಸಿಎಂ ಸಿದ್ದರಾಮಯ್ಯ

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದೆಹಲಿಗೆ 'ಕೈ' ಶಾಸಕರು ದೌಡು: ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು- ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ಚಿಕ್ಕಮಗಳೂರು: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು.‌ ಈಗ ನನ್ನ ಅವಧಿಯಲ್ಲಿಯೇ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾಗುತ್ತಿರುವುದು ಸಂತಸ ತಂದಿದೆ. ಬಿಜೆಪಿಯವರ ಅವಧಿಯಲ್ಲಿ ಸೇತುವೆ ನಿರ್ಮಾಣಕ್ಕೆ ಯಾವುದೇ ಕ್ರಮವಾಗಿರಲಿಲ್ಲ ಎಂದರು.

ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ಕಾರ್ಯ ಬಾಕಿಯಿದೆ. ಐದು ರಾಜ್ಯಗಳ ಚುನಾವಣೆ, ಬಜೆಟ್ ಅಧಿವೇಶನ ಸಂಪುಟ ಪುನರ್ರಚನೆ ವಿಳಂಬಕ್ಕೆ ಕಾರಣವಿರಬಹುದುಎಂದರು.

ಅರಣ್ಯ ಹಕ್ಕುಪತ್ರಕ್ಕೆ ಸಭೆ

ಮಲೆನಾಡಿನಲ್ಲಿ ರೆಸಾರ್ಟ್ ಗಳಿಗೆ ಬೇಕಾಬಿಟ್ಟಿಯಾಗಿ ಅನುಮತಿ ನೀಡುತ್ತಿರುವ ಸರ್ಕಾರ, ಅರಣ್ಯವಾಸಿಗಳಿಗೆ ಹಕ್ಕು ಪತ್ರ ನೀಡುತ್ತಿಲ್ಲ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಅರಣ್ಯ ಇಲಾಖೆಯಿಂದ ಹಕ್ಕು ಪತ್ರ ನೀಡುವುದೂ ಸೇರಿದಂತೆ ಹಲವು ವಿಷಯದ ಬಗ್ಗೆ ಸಧ್ಯದಲ್ಲಿಯೇ ಸಭೆ ನಡೆಸಲಾಗುವುದು ಎಂದರು.

ಪ್ರವಾಸಿಗರಿಗೆ ಕರ್ನಾಟಕ ಸುರಕ್ಷಿತ

ಪ್ರವಾಸಿಗರಿಗೆ ಕರ್ನಾಟಕ ಸುರಕ್ಷಿತ ತಾಣವಲ್ಲ ಎಂದು ಕೇರಳದಿಂದ ಟೀಕೆಗಳು ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇರಳ ರಾಜ್ಯದ ಬಾಲಕಿ ಚಿಕ್ಕಮಗಳೂರಿಗೆ ಬಂದು ಮೃತಪಟ್ಟಿರುವ ವಿಷಯ ತನಿಖೆಯಾಗಲಿದೆ. ಆದರೆ ಕರ್ನಾಟಕ ರಾಜ್ಯ ಪ್ರವಾಸಿಗರಿಗೆ ಸುರಕ್ಷಿತವಲ್ಲ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.