ರಾಜ್ಯ

ಕಾರ್ಕಳ: ಉದ್ಯಮಿ ಸುದೀಪ್ ರೈ ಸೂಸೈಡ್ ಕೇಸ್​​ಗೆ ಬಿಗ್​​ ಟ್ವಿಸ್ಟ್​​; ಪತ್ನಿ ಸೌಮ್ಯಾ ಶೆಟ್ಟಿ ಅರೆಸ್ಟ್

ಸೌಮ್ಯ ಮೇಲಿನ ಆರೋಪಗಳು ಪ್ರಾಥಮಿಕ ತನಿಖೆಯಲ್ಲಿ ಸಾಬೀತಾದ ಹಿನ್ನೆಲೆ ಕಾರ್ಕಳ ನಗರ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಕಾರ್ಕಳ: ಉದ್ಯಮಿ ಸುದೀಪ್ ರೈ ಸೂಸೈಡ್ ಕೇಸ್​​ಗೆ ಬಿಗ್​​ ಟ್ವಿಸ್ಟ್​​; ಪತ್ನಿ ಸೌಮ್ಯಾ ಶೆಟ್ಟಿ ಅರೆಸ್ಟ್
ಸುದೀಪ್ ರೈ ಮತ್ತು ಸೌಮ್ಯ ಶೆಟ್ಟಿ(ಸಂಗ್ರಹ ಚಿತ್ರ)
Published On :

ಉಡುಪಿ: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆತನ ಪತ್ನಿ ಸೌಮ್ಯ ಸುದೀಪ್​ ಜೊತೆಗೆ ಎರಡನೇ ಮದುವೆಯಾಗಿದ್ದು, ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದಾಳೆಂದು ಆತನ ತಂದೆ ದಾಮೋದರ ಶೆಟ್ಟಿ ಕೇಸ್ ದಾಖಲಿಸಿದ್ದರು.

ಸೌಮ್ಯ ಮೇಲಿನ ಆರೋಪಗಳು ಪ್ರಾಥಮಿಕ ತನಿಖೆಯಲ್ಲಿ ಸಾಬೀತಾದ ಹಿನ್ನೆಲೆ ಕಾರ್ಕಳ ನಗರ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಪತಿಗೆ ಬೆದರಿಕೆ ಹಾಕಿದ್ದ ಸೌಮ್ಯ

ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಮೂಲದ ಸುದೀಪ್ ರೈ ಫೆಬ್ರವರಿ 17ರಂದು ಕಾರ್ಕಳ ಮೂಲದ ಸೌಮ್ಯ ಶೆಟ್ಟಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ಸುದೀಪ್ ರೈ ಕಾರ್ಕಳದ ಬಂಗ್ಲೆಗುಡ್ಡೆಯಲ್ಲಿರುವ ಪತ್ನಿಯ ಮನೆಯಲ್ಲಿ ವಾಸವಾಗಿದ್ದರು. ಮಾರ್ಚ್ 17ರಂದು ತಾಯಿಯೊಂದಿಗೆ ಕಾರಿನಲ್ಲಿ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ವೇಳೆ, ಸೌಮ್ಯ ಶೆಟ್ಟಿ ಕಾರಿಗೆ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾಳೆಂದು ಸುದೀಪ್ ಅವರ ಪೋಷಕರು ಆರೋಪಿಸಿದ್ದರು.

ಈ ಘಟನೆಯ ಬಳಿಕ ಮಾರ್ಚ್ 22ರಂದು ಸುದೀಪ್ ರೈ ಅವರು ವಿಷ ಸೇವಿಸಿರುವುದಾಗಿ ಸೌಮ್ಯ ಶೆಟ್ಟಿ ಸಂಬಂಧಿಕರಿಗೆ ಕರೆಮಾಡಿ ತಿಳಿಸಿದ್ದಳು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 29ರಂದು ಮೃತಪಟ್ಟಿದ್ದರು.

ಬಳಿಕ ಪೊಲೀಸ್ ಠಾಣೆ ಮೆಟ್ಟಿಲೇರಿದ ಸುದೀಪ್ ತಂದೆ ಸೌಮ್ಯಳೇ ಮಗನಿಗೆ ಮಾನಸಿಕ ಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದಳು ಎಂದು ದೂರು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.