ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ಅಪಘಾತ: ಮಾನವೀಯತೆ ಮೆರೆದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ!
ಬೆಂಗಳೂರು- ಹಾಸನ ಹೆದ್ದಾರಿಯಲ್ಲಿ ಆಟೋ ಮತ್ತು ಕಾರು ನಡುವೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಸಚಿವರು ಮಾನವೀಯತೆ ಮೆರೆದಿದ್ದಾರೆ.

ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾನವೀಯತೆ ಮೆರೆದಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಕುಮಾರಸ್ವಾಮಿ ಹಾಸನಕ್ಕೆ ತೆರಳುವಾಗ ಈ ಘಟನೆ ನಡೆದಿದೆ.
ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ಆಟೋ ಮತ್ತು ಕಾರು ನಡುವೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಸಚಿವರು ಮಾನವೀಯತೆ ಮೆರೆದಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿದ್ದ ವಿಕ್ರಂ ಎಂಬ ವ್ಯಕ್ತಿಯನ್ನು ಅರ್ಧ ಗಂಟೆಯಿಂದ ಯಾರು ಗಮನಿಸದೆ ರಸ್ತೆಯಲ್ಲಿಯೇ ಇದ್ದಿದ್ದನ್ನ ನೋಡಿ ಪೊಲೀಸ್ ವಾಹನದಲ್ಲಿ ಆದಿಚುಂಚನಗಿರಿ ಆಸ್ಪತ್ರೆಗೆ ಕಳುಹಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ಅಲ್ಲಿನ ವೈದ್ಯರಿಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ.
ಹೌದು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿಕ್ರಮ್ ನರಳಾಡುತ್ತಿದ್ದರು.ಇದೇ ಮಾರ್ಗವಾಗಿ ತೆರಳುತ್ತಿದ್ದ ಕೇಂದ್ರ ಸಚಿವರು ತಮ್ಮ ಕಾರನ್ನ ನಿಲ್ಲಿಸಿ ಹೆದ್ದಾರಿ ಗಸ್ತು ಅವರಿಗೆ ದೂರವಾಣಿ ಕರೆಮಾಡಿ, ಅವರನ್ನ ಆದಿಚುಂಚನಗಿರಿ ಆಸ್ಪತ್ರೆಗೆ ಕಳುಹಿಸಿಕೊಟ್ಟರು.
ಜೊತೆಗೆ ಖುದ್ದು ಸಚಿವರೇ ವೈದ್ಯರಿಗೆ ಕರೆಮಾಡಿ ಸ್ಪಂದಿಸುವಂತೆ ತಿಳಿಸಿದರು. ಸಚಿವರ ಮಾನವೀಯತೆ ಕಾರ್ಯಕ್ಕೆ ಗಾಯಾಳು ಧನ್ಯವಾದ ಅರ್ಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



