ಅಕ್ರಮ ಸಂಬಂಧ, ಮಹಿಳೆ ಕಿರುಕುಳ ಆರೋಪ: ಜಿಮ್ ತರಬೇತುದಾರ ಆತ್ಮಹತ್ಯೆ
ಮೃತನನ್ನು 27 ವರ್ಷದ ಜಿಮ್ ತರಬೇತುದಾರ ದಿಲೀಪ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ದಿಲೀಪ್ ಗೆ ವಿವಾಹಿತ ಮಹಿಳೆಯೊಬ್ಬರಿಂದ ಬೆದರಿಕೆ ಇತ್ತು.

ಬೆಂಗಳೂರು: ಬೆಂಗಳೂರು ನಗರದ ನೆಲಮಂಗಲದಲ್ಲಿರುವ ತನ್ನ ಮನೆಯಲ್ಲಿ 27 ವರ್ಷದ ಜಿಮ್ ತರಬೇತುದಾರನೊಬ್ಬ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಮೃತನನ್ನು 27 ವರ್ಷದ ಜಿಮ್ ತರಬೇತುದಾರ ದಿಲೀಪ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ದಿಲೀಪ್ ಗೆ ವಿವಾಹಿತ ಮಹಿಳೆಯೊಬ್ಬರಿಂದ ಬೆದರಿಕೆ ಇತ್ತು. ಆಕೆ ದಿಲೀಪ್ ಗೆ ನಿರಂತರ ಕಿರುಕುಳ ನೀಡುತ್ತಿದ್ದರು. ಅದನ್ನು ಸಹಿಸಲಾಗದೇ ದಿಲೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ದಿಲೀಪ್ ವೃತ್ತಿಪರ ಬಾಡಿಬಿಲ್ಡರ್ ಆಗಿದ್ದು, ಹಲವಾರು ಸ್ಪರ್ಧೆಗಳನ್ನು ಗೆದ್ದಿದ್ದಾರೆ. ಜಿಮ್‌ನಲ್ಲಿ ಫಿಟ್‌ನೆಸ್ ತರಬೇತುದಾರರಾಗಿ ಕೆಲಸ ಮಾಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ದಿಲೀಪ್ ಅವರ ಸಹೋದರಿಗೆ ಈ ಕಠಿಣ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದ. ಮಹಿಳೆ ಸಂದೇಶ ಕಳುಹಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ.
ನಂತರ ಕುಟುಂಬ ಸದಸ್ಯರು ಕೋಣೆಯ ಬಾಗಿಲು ಒಡೆದು ನೋಡಿದಾಗ ಅವರು ಸೀಲಿಂಗ್ ಫ್ಯಾನ್ ಗೆ ದಿಲೀಪ್ ನೇಣು ಬಿಗಿದ ಸ್ಥಿತಿಯಲ್ಲಿ ನೇತಾಡುತ್ತಿರುವುದು ಕಂಡುಬಂದಿದೆ.
ವಿವಾಹಿತ ಮಹಿಳೆಯೊಂದಿಗೆ ಸ್ನೇಹ
ದಿಲೀಪ್ ಸುಮಾರು ಎರಡು ವರ್ಷಗಳ ಹಿಂದೆ ಜಿಮ್‌ನಲ್ಲಿ 42 ವರ್ಷದ ವಿವಾಹಿತ ಮಹಿಳೆಯೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದ. ಅಲ್ಲಿ ಅವರು ಫಿಟ್‌ನೆಸ್ ತರಬೇತಿಗಾಗಿ ಬರುತ್ತಿದ್ದರು. ಈ ಅವಧಿಯಲ್ಲಿ, ಅವರು ಸ್ನೇಹಿತರಾದರು ಮತ್ತು ನಂತರ ಅದು ವೈಯಕ್ತಿಕ ಸಂಬಂಧವಾಗಿ ಮಾರ್ಪಟ್ಟಿತು ಎಂದು ಪೊಲೀಸರು ತಿಳಿಸಿದ್ದಾರೆ.
ಸಾವಿಗೂ ಮುನ್ನ ಮಹಿಳೆಗೆ ಕರೆ ಮಾಡಿದ್ದ ದಿಲೀಪ್
ಇನ್ನು ಆತ್ಮಹತ್ಯೆಗೂ ಮುನ್ನ ದಿಲೀಪ್ ಮಹಿಳೆಗೆ ವಿಡಿಯೋ ಕರೆ ಮಾಡಿ ತನ್ನ ನಿರ್ಧಾರದ ಬಗ್ಗೆ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಇದನ್ನು ನಿರ್ಲಕ್ಷಿಸಿದ ಮಹಿಳೆ, ದಿಲೀಪ್ ಕುಟುಂಬವು ಮಹಿಳೆ ಹಣ ಮತ್ತು ಆಸ್ತಿಗಾಗಿ ಆತನನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದರು ಎಂದು ಪ್ರತ್ಯಾರೋಪ ಮಾಡಿದ್ದಾರೆ.
ಅವರ ನಡುವಿನ ಅನ್ಯೋನ್ಯತೆಯ ನಂತರ, ಈ ವಿಷಯವು ಪೊಲೀಸರನ್ನು ತಲುಪಿ ಮಹಿಳೆಯ ಪತಿಯ ಸಮ್ಮುಖದಲ್ಲಿ ಪರಸ್ಪರ ಇತ್ಯರ್ಥಪಡಿಸಲಾಯಿತು, ಆದರೆ ಕಿರುಕುಳ ಮುಂದುವರೆದಿತ್ತು ಎಂದು ದಿಲೀಪ್ ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬ ಸದಸ್ಯರು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದು, ಕಿರುಕುಳವೇ ಪುರುಷನ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ.
ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ವಿಷಯವನ್ನು ತನಿಖೆ ಮಾಡುತ್ತಿದ್ದಾರೆ. ಅವರು ಎಲ್ಲಾ ಆರೋಪಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



