ಶಿವಮೊಗ್ಗ: ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿ; 17 ಪ್ರಯಾಣಿಕರಿಗೆ ಗಾಯ
ಗಾಯಾಳುಗಳಲ್ಲಿ 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಸೋಮವಾರ ಖಾಸಗಿ ಬಸ್ ಪಲ್ಟಿಯಾಗಿ ಹದಿನೇಳು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳಲ್ಲಿ 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಾಯಾಳುಗಳೆಲ್ಲರನ್ನೂ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಇಂದು ಬೆಳಗ್ಗೆ ಖಾಸಗಿ ಬಸ್ ಶಿವಮೊಗ್ಗದಿಂದ ಶಿಕಾರಿಪುರ ಪಟ್ಟಣವನ್ನು ಪ್ರವೇಶಿಸಿದಾಗ ಈ ಅಪಘಾತ ಸಂಭವಿಸಿದೆ.
ಬಸ್ ಚಾಲಕ, ತನ್ನ ಮುಂದೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಎಡಕ್ಕೆ ತಿರುಗಿಸಿದ್ದಾನೆ. ಹೀಗಾಗಿ, ಬಸ್ ಪಲ್ಟಿಯಾಗಿದೆ. ಇದರಿಂದ ಬಸ್ನಲ್ಲಿದ್ದ 17ಕ್ಕೂ ಹೆಚ್ಚಿನ ಪ್ರಯಾಣಿಕರಿಗೆ ಗಾಯಗಳಾಗಿವೆ.
ತಕ್ಷಣವೇ ಗಾಯಾಳುಗಳನ್ನು ಶಿಕಾರಿಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದರೆ, ಕೆಲವರಿಗೆ ಕೈ ಕಾಲು ಮುರಿತವಾದ ಕಾರಣಕ್ಕೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಲ್ಲಿಗೆ ಸಂಸದ ಬಿ. ವೈ. ರಾಘವೇಂದ್ರ ಅವರು ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.
ಘಟನೆ ಸುತ್ತಮುತ್ತಲ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



