ರಾಜ್ಯ

ಮಹಿಳೆಯರಿಗೆ ಶೇ.33 ಮೀಸಲಾತಿಗೆ ವಿಜಯೇಂದ್ರ ಶ್ಲಾಘನೆ: ನಾರಿ ಶಕ್ತಿ ವಂದನ ಕಾಯ್ದೆಗೆ ಬೆಂಬಲ

ಪ್ರಧಾನಿ ನರೇಂದ್ರ ಮೋದಿ ಮಹಿಳೆಯರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. “ದೇಶದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಮಹಿಳೆಯರೇ ಆಗಿರುವುದರಿಂದ, ಅವರಿಗೆ ಶೇ.33 ರಷ್ಟು ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಮಹಿಳೆಯರಿಗೆ ಶೇ.33 ಮೀಸಲಾತಿಗೆ ವಿಜಯೇಂದ್ರ ಶ್ಲಾಘನೆ: ನಾರಿ ಶಕ್ತಿ ವಂದನ ಕಾಯ್ದೆಗೆ ಬೆಂಬಲ
ಬಿ ವೈ ವಿಜಯೇಂದ್ರ
Published On :

ಬೆಂಗಳೂರು: ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಟೌನ್‌ಹಾಲ್ ನಲ್ಲನ ನಡೆದ ‘ನಾರಿ ಶಕ್ತಿ ವಂದನ ಕಾಯ್ದೆ - 2026’ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಮಹಿಳೆಯರು ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಮಹಿಳೆಯರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. “ದೇಶದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಮಹಿಳೆಯರೇ ಆಗಿರುವುದರಿಂದ, ಅವರಿಗೆ ಶೇ.33 ರಷ್ಟು ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಈ ಕಾಯ್ದೆ ಜಾರಿಗೆ ಬರಲು ನಾವು ಕಾತರದಿಂದ ಕಾಯುತ್ತಿದ್ದೇವೆ ಎಂದು ತಿಳಿಸಿದರು.

ಇದೇ ವೇಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಈ ಕಾಯ್ದೆ ಜಾರಿಗೆ ಬಂದ ನಂತರ ಮಹಿಳೆಯರ ನೇತೃತ್ವದಲ್ಲಿ ಅಭಿವೃದ್ಧಿಗೆ ವೇಗ ಸಿಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳೆಯರಿಗೆ ಈ ಮಸೂದೆಯನ್ನು ಬೆಂಬಲಿಸಲು 96671 73333 ಸಂಖ್ಯೆಗೆ ಮಿಸ್‌ಡ್ ಕಾಲ್ ಮೂಲಕ ಬೆಂಬಲ ಸೂಚಿಸುವಂತೆ ಪ್ರೋತ್ಸಾಹಿಸಲಾಯಿತು.

ಪದ್ಮಶ್ರೀ ಪುರಸ್ಕೃತ ಸಾಮಾಜಿಕ ಕಾರ್ಯಕರ್ತೆ ಡಾ. ಸುಶೀಲಮ್ಮ ಕೂಡ ಮಾತನಾಡಿ, ಪಂಚಾಯತ್ ಮಟ್ಟದಲ್ಲಿ 50% ಮಹಿಳಾ ಮೀಸಲಾತಿಗಾಗಿ ನಾವು ಹೋರಾಟ ಮಾಡಿದ್ದೇವೆ. ಈ ಮಸೂದೆಯನ್ನು ನಾವು ಬೆಂಬಲಿಸುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.