ಚಾಮರಾಜನಗರ: ಟಿಪ್ಪರ್-ಕಾರಿನ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಮೂವರು ಸಾವು
ಬೆಂಗಳೂರಿಗೆ ತೆರಳುತ್ತಿದ್ದ ಕಾರಿಗೆ ಗುಂಡ್ಲುಪೇಟೆಯಿಂದ ಕೇರಳಂಗೆ ಎಂ-ಸ್ಯಾಂಡ್ ಹೊತ್ತು ಸಾಗುತ್ತಿದ್ದ ಕೆ ಎಲ್ 47 ಎಂ 3272 ನೋಂದಣಿಯ 18 ಚಕ್ರದ ಟಿಪ್ಪರ್ ಡಿಕ್ಕಿ ಹೊಡೆದಿದೆ.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗೇಟ್ ಬಳಿ ಮಂಗಳವಾರ ಟಿಪ್ಪರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ಕೇರಳ ಮೂಲದ ಆಯೇಷಾ ನೂರಿ(41), ಅವರ ಪುತ್ರಿ ನುಹಾ(18) ಹಾಗೂ ಮಹಮ್ಮದ್ ಅಜೀರ್ ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ನಹಿಯಾನ್ ಎಂಬ 9 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಮ್ಮದ್ ಅಜೀರ್ ಅವರು ತಮ್ಮ ಸಹೋದರಿ ಮತ್ತು ಆಕೆಯ ಮಕ್ಕಳನ್ನು ಕಾರಿನಲ್ಲಿ ಕರೆದುಕೊಂಡು ಹೋಗುವಾಗ ಈ ಅಪಘಾತ ಸಂಭವಿಸಿದೆ.
ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರಿಗೆ ಗುಂಡ್ಲುಪೇಟೆಯಿಂದ ಕೇರಳಂಗೆ ಎಂ-ಸ್ಯಾಂಡ್ ಹೊತ್ತು ಸಾಗುತ್ತಿದ್ದ ಕೆ ಎಲ್ 47 ಎಂ 3272 ನೋಂದಣಿಯ 18 ಚಕ್ರದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಮ್ಮದ್ ಅಜೀರ್ ಅವರು ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೇಲ್ನೋಟಕ್ಕೆ ಟಿಪ್ಪರ್ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದು ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿ, ಟಿಪ್ಪರ್ ಹಾಗೂ ಕಾರನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



